ಪಠ್ಯೇತರ ಚಟುವಟಿಕೆಗೂ ಹೆಚ್ಚಿನ ಆದ್ಯತೆ ಕೊಡಿ Association

ಗುರುಶಾಂತೇಶ್ವರ ದಾಸೋಹ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿ. ಲಿಂಗಯ್ಯ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಎಸ್.ವಿ ಶಶಿಧರ್, ಎಸ್.ಕೆ. ಪ್ರಸಾದ್, ಎಚ್.ಬಿ. ಬಸವರಾಜ್, ಬಿ.ಎಸ್. ಕಲ್ಪನಾ, ಜಿ. ಸಂತೋಷ್‌ಕುಮಾರ್ ಇದ್ದರು. Association
ಗುರುಶಾಂತೇಶ್ವರ ದಾಸೋಹ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿ. ಲಿಂಗಯ್ಯ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಎಸ್.ವಿ ಶಶಿಧರ್, ಎಸ್.ಕೆ. ಪ್ರಸಾದ್, ಎಚ್.ಬಿ. ಬಸವರಾಜ್, ಬಿ.ಎಸ್. ಕಲ್ಪನಾ, ಜಿ. ಸಂತೋಷ್‌ಕುಮಾರ್ ಇದ್ದರು. Association
Published on

ಪ್ರಮುಖ ಮುಖ್ಯಾಂಶಗಳು

  • ಎಸ್.ವಿ ಶಶಿಧರ್ ಸಲಹೆ
  • ವಿದ್ಯಾರ್ಥಿ ಸಂಘ ಉದ್ಘಾಟನೆ
  • ಮಠಮಾನ್ಯಗಳಿಗಿದೆ ಸಮಾಜದಲ್ಲಿ ವಿಶೇಷ ಸ್ಥಾನ
ಸಿರಿಗೆರೆ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಜೀವನದಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ ಎಂದು ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಎಸ್.ವಿ. ಶಶಿಧರ್ ಹೇಳಿದರು. Association
ಇಲ್ಲಿನ ಗುರುಶಾಂತೇಶ್ವರ ದಾಸೋಹ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿ. ಲಿಂಗಯ್ಯ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣವು ಅವಿಭಾಜ್ಯ ಅಂಗವಾಗಿದೆ. ಶಿಕ್ಷಣ ಮತ್ತು ಕ್ರೀಡೆಯ ಜತೆಗೆ ನೈತಿಕ ಮೌಲ್ಯಗಳು, ಸಂಸ್ಕಾರ ಹಾಗೂ ವ್ಯಕ್ತಿತ್ವ ವಿಕಾಸಕ್ಕೂ ಸಮಾನ ಮಹತ್ವ ನೀಡಿದಾಗ ಮಾತ್ರ ವಿದ್ಯಾರ್ಥಿಗಳು ಸಮಗ್ರವಾಗಿ ರೂಪುಗೊಳ್ಳಲು ಸಾಧ್ಯ ಎಂದು ತಿಳಿಸಿದರು.
ಮಠಮಾನ್ಯಗಳಿಗೆ ಸಮಾಜದಲ್ಲಿ ವಿಶೇಷ ಸ್ಥಾನವಿದ್ದು, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಅವು ಮಹತ್ವದ ಕ್ರಾಂತಿಯನ್ನುಂಟು ಮಾಡಿವೆ. ಆ ಪರಂಪರೆಯಲ್ಲಿ ಸಿರಿಗೆರೆ ಮಠವೂ ಪ್ರಮುಖ ಸ್ಥಾನವನ್ನು ಹೊಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಆದರ್ಶ ವ್ಯಕ್ತಿಯಾಗಿ: ವಿದ್ಯಾರ್ಥಿ ದೆಸೆಯಲ್ಲೇ ಮಾತನಾಡುವ ಕಲೆ, ಬರವಣಿಗೆ ಹಾಗೂ ಉತ್ತಮ ಆಲೋಚನಾ ಶಕ್ತಿ ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ನಾವು ಮಕ್ಕಳಿಗೆ ಹೆಚ್ಚು ಅಂಕ ಗಳಿಸುವಂತೆ ಹೇಳುತ್ತೇವೆ. ದೇಶದ ಆದರ್ಶ ನಾಗರಿಕರಾಗಿ ರೂಪುಗೊಳ್ಳುವಂತೆ ಪ್ರೇರೇಪಿಸುವುದು ಅಗತ್ಯವಾಗಿದೆ ಎಂದು ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ವಿಶೇಷಾಧಿಕಾರಿ ಎಸ್.ಕೆ. ಪ್ರಸಾದ್ ತಿಳಿಸಿದರು.
ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎಚ್.ಬಿ. ಬಸವರಾಜ್ ಮಾತನಾಡಿ, ಇಂದಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಮಾನಸಿಕ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಮೊಬೈಲ್ ಮತ್ತು ದೂರದರ್ಶನಕ್ಕೆ ಅತಿಯಾಗಿ ಅಂಟಿಕೊಳ್ಳುವ ಬದಲು ಉತ್ತಮ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಂಡರೆ ಅದು ವ್ಯಕ್ತಿತ್ವ ವಿಕಾಸಕ್ಕೂ, ಉತ್ತಮ ಜೀವನ ನಿರ್ಮಾಣಕ್ಕೂ ಪೂರಕವಾಗುತ್ತದೆ ಎಂದು ಸಲಹೆ ನೀಡಿದರು. ನಿವೃತ್ತ ಪ್ರಾಚಾರ್ಯೆ ಬಿ.ಎಸ್. ಕಲ್ಪನಾ ಹಾಗೂ ಜಿ.ಸಂತೋಷ್‌ಕುಮಾರ್ ಮಾತನಾಡಿದರು. ಅಧ್ಯಾಪಕ ಕಾರ್ಯದರ್ಶಿ ಈ. ದೇವರಾಜು, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎ.ಮಾರಾಂಜನೇಯ, ಸಹ ಕಾರ್ಯದರ್ಶಿ ಕೆ.ಅಮೃತಾ, ವಿಜ್ಞಾನ ವಿಭಾಗದ ಸಂಯೋಜಕ ಕೆ.ಎನ್.ನಟರಾಜು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net