ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ. ಈ ಚುನಾವಣೆಯಲ್ಲಿ ಒಳ ಮೀಸಲಾತಿಯ ಬಿಸಿ ತಟ್ಟುವುದಿಲ್ಲ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯ ಒದಗಿಸಲು ಬದ್ಧವಾಗಿದೆ ಎಂದ ಸಚಿವರು, ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.