ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಉಳಿಸುವಂತೆ ಒತ್ತಾಯಿಸಿ ಶುಕ್ರವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮಹಾಂತೇಶ್ ಬಿಳೂರು, ಕೆ.ಈರಣ್ಣ, ಭಾವನಾ, ದಿವ್ಯಾ, ಸ್ವಪ್ನಾ, ದರ್ಶನ್, ದೇವೆಗೌಡ, ಮನು, ನೀತಿಶ್, ರಂಗಸ್ವಾಮಿ ಇದ್ದರು.
ಚಿತ್ರದುರ್ಗ:ನಗರದ ಸರ್ಕಾರಿ ವಿಜ್ಞಾನ ಕಾಲೇಜು ಉಳಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಹಾಗೂ ವಿದ್ಯಾರ್ಥಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಈ ಕಾಲೇಜಿನಲ್ಲಿ ಕೇಂದ್ರೀಯ ವಿದ್ಯಾಲಯ ಹಾಗೂ ಕಾಲೇಜು ಆವರಣದಲ್ಲಿ ಮಹಿಳಾ ಕಾಲೇಜು ಆರಂಭಿಸುವುದನ್ನು ವಿರೋಽಸಿ ಜಿಲ್ಲಾಽಕಾರಿಗೆ ಮನವಿ ಸಲ್ಲಿಸಲಾಯಿತು.
ಎಐಡಿಎ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಬೀಳೂರು ಮಾತನಾಡಿ, ಏಳು ದಶಕಗಳನ್ನು ಕಳೆದಿರುವ ವಿಜ್ಞಾನ ಕಾಲೇಜಿ ನಲ್ಲಿ ೧೭೦೦ಕ್ಕೂ ಅಽಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸಮರ್ಪಕ ಕೊಠಡಿ, ಸಿಬ್ಬಂದಿ ಹಾಗೂ ಪ್ರಯೋಗಾಲಯ ಕೊರತೆಯಿಂದಾಗಿ ಈಗಾಗಲೇ ಎರಡು ಪಾಳಿಯಲ್ಲಿ ಕಾಲೇಜಿನ ತರಗತಿಗಳು ನಡೆಯುತ್ತಿವೆ ಎಂದರು.
ಇAತಹ ಪರಿಸ್ಥಿತಿಯಲ್ಲಿ ವಿಜ್ಞಾನ ಕಾಲೇಜಿನ ನೆಲಮಹಡಿ ಕೊಠಡಿಗಳನ್ನು ಕೇಂದ್ರೀಯ ವಿದ್ಯಾಲಯಕ್ಕೆ ನೀಡಲಾಗಿದೆ. ಇದರೊಂದಿಗೆ ಸರ್ಕಾರಿ ಮಹಿಳಾ ಪದವಿ ಕಾಲೇಜಿಗೆ ಕೂಡ ವಿಜ್ಞಾನ ಕಾಲೇಜಿನ ಆವರಣದಲ್ಲಿಯೇ ಸ್ಥಳ ಮಂಜೂರಾಗಿದೆ ಎಂದು ಗೊತ್ತಾಗಿದೆ. ಮಹಿಳಾ ಕಾಲೇಜಿಗೆ ಸ್ವಂತ ಕಟ್ಟಡವಾಗಬೇಕೆಂಬುದು ವಿದ್ಯಾರ್ಥಿಗಳ ಬಹುದಿನದ ಬೇಡಿಕೆ ಎಂದು ತಿಳಿಸಿದರು.
ವಿಜ್ಞಾನ ಕಾಲೇಜಿನ ವಾತಾವರಣಕ್ಕೆ ಧಕ್ಕೆಯುಂಟು ಮಾಡಿ ಹೊಸ ಕಟ್ಟಡ ಒದಗಿಸುವುದು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಿದಂತಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.