Hiriyuru: ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು

Hiriyuru: ದೊಗ್ಗನಾಳ್ ಗ್ರಾಮದಲ್ಲಿ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ. ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.
Hiriyuru: ದೊಗ್ಗನಾಳ್ ಗ್ರಾಮದಲ್ಲಿ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ. ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಎಂ. ಚಂದ್ರಪ್ಪ ಹೇಳಿಕೆ
  • ದೊಗ್ಗನಾಳ್ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ
  • ಎರಡು ತಿಂಗಳಲ್ಲಿ ತಾಲೂಕಿನ 37 ಕೆರೆಗಳಿಗೆ ಭದ್ರಾ ಯೋಜನೆಯಿಂದ ನೀರು
ಹೊಳಲ್ಕೆರೆ: ಮುಂದಿನ 25 ವರ್ಷಗಳ ಜನಸಂಖ್ಯೆ ಆಧರಿಸಿ ಹಿರಿಯೂರಿನ ವಾಣಿ ವಿಲಾಸ ಸಾಗರದಿಂದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ಶಾಸಕ ಡಾ.ಎಂ. ಚಂದ್ರಪ್ಪ ಹೇಳಿದರು.
ತಾಲೂಕಿನ ದೊಗ್ಗನಾಳ್ ಗ್ರಾಮದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಡಾಂಬರು ಮತ್ತು ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಇನ್ನು ಎರಡು ತಿಂಗಳಲ್ಲಿ ತಾಲೂಕಿನ 37 ಕೆರೆಗಳಿಗೆ ಭದ್ರಾ ಯೋಜನೆಯಿಂದ ನೀರು ತುಂಬಿಸುತ್ತೇನೆ. 17 ಕಡೆ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸಿದ್ದೇನೆ. ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ 13.5 ಎಕರೆ ಪ್ರದೇಶದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ 400 ಕೆ.ವಿ. ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ. ಜೋಗ್‌ಪಾಲ್ಸ್‌ನಿಂದ ಇಲ್ಲಿಗೆ ನೇರವಾಗಿ ವಿದ್ಯುತ್ ಪೂರೈಕೆಯಾಗಲಿದೆ. ದಿನಕ್ಕೆ 10ಗಂಟೆ ರೈತರಿಗೆ ವಿದ್ಯುತ್ ದೊರೆಯಲಿದೆ ಎಂದರು.
ಜಿಪಂ ಮಾಜಿ ಸದಸ್ಯ ಮಹೇಶಣ್ಣ, ಬಿಜೆಪಿ ಮಂಡಲ ಅಧ್ಯಕ್ಷ ಕುಮಾರಣ್ಣ, ಗ್ರಾಪಂ ಅಧ್ಯಕ್ಷೆ ಸವಿತಾ, ಡಾ. ವಿಶ್ವೇಶ್ವರಯ್ಯ, ನಿವೃತ್ತ ಡಿವೈಎಸ್‌ಪಿ ಚಂದ್ರಣ್ಣ, ಜಗದೀಶ್, ರಮೇಶ್, ನುಲೇನೂರು ಶೇಖರ್, ಮರುಳಸಿದ್ದಪ್ಪ, ಗುತ್ತಿಗೆದಾರ ರಾಜಶೇಖರ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net