ಜಿಲ್ಲಾಽಕಾರಿ ಕಚೇರಿ ಹೊಸ ಕಟ್ಟಡಕ್ಕೆ ತೋಟಗಾರಿಕೆ ಇಲಾಖೆ ಜಾಗ

ಚಿತ್ರದುರ್ಗ ಡಿಸಿ ಕಚೇರಿ ಹೊಸ ಕಟ್ಟಡಕ್ಕೆ ಸ್ಥಳಾವಕಾಶ ಒದಗಿಸುವ ಕುರಿತಂತೆ ಬೆಳಗಾವಿಯಲ್ಲಿ ಸಚಿವ ಡಿ. ಸುಧಾಕರ್ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಜಿಲ್ಲೆ ಶಾಸಕರು,ಅಽಕಾರಿಗಳ ಸಭೆ ನಡೆಯಿತು. ಶಾಸಕರಾದ ಟಿ.ರಘುಮೂರ್ತಿ, ಎನ್.ವೈ. ಗೋಪಾಲಕೃಷ್ಣ ಇದ್ದರು.
ಚಿತ್ರದುರ್ಗ ಡಿಸಿ ಕಚೇರಿ ಹೊಸ ಕಟ್ಟಡಕ್ಕೆ ಸ್ಥಳಾವಕಾಶ ಒದಗಿಸುವ ಕುರಿತಂತೆ ಬೆಳಗಾವಿಯಲ್ಲಿ ಸಚಿವ ಡಿ. ಸುಧಾಕರ್ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಜಿಲ್ಲೆ ಶಾಸಕರು,ಅಽಕಾರಿಗಳ ಸಭೆ ನಡೆಯಿತು. ಶಾಸಕರಾದ ಟಿ.ರಘುಮೂರ್ತಿ, ಎನ್.ವೈ. ಗೋಪಾಲಕೃಷ್ಣ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ಸಚಿವ ಸುಧಾಕರ್ ನೇತೃತ್ವದಲ್ಲಿ ಸಭೆ
  • ಹಿರಿಯ ಅಽಕಾರಿಗಳು ಭಾಗಿ
  • ಡಿಸಿಯಿಂದ ಪ್ರಸ್ತಾವನೆ ಸಲ್ಲಿಕೆಗೆ ಅಗತ್ಯ ಕ್ರಮ
ಚಿತ್ರದುರ್ಗ: ನಗರಕ್ಕೆ ಸಮೀಪದ ಕುಂಚಿಗನಾಳ್ ಬಳಿ ಹೊಸದಾಗಿ ನಿರ್ಮಿಸಿರುವ ಜಿಲ್ಲಾಽಕಾರಿ ಕಚೇರಿ ಕಟ್ಟಡವನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸುವ ಪ್ರಸ್ತಾವನೆಗೆ ಅನುಮೋದನೆ ನೀಡುವ ಹಂತದಲ್ಲಿದ್ದು, ಸಾರ್ವಜನಿಕರ ಅನುಕೂಲಕ್ಕಾ ಗಿ ನಗರದ ಡಿಸಿ ನಿವಾಸದ ಸುತ್ತಮುತ್ತಲಿನ ಸ್ಥಳದಲ್ಲಿ ಹೊಸದಾಗಿ ಜಿಲ್ಲಾಡಳಿತ ಭವನ ನಿರ್ಮಿಸಲು ಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಚಿತ್ರದುರ್ಗ ಜಿಲ್ಲಾಽಕಾರಿ ಕಚೇರಿ ನಿರ್ಮಾಣ ಕಾಮಗಾರಿ ಹಾಗೂ ಡಿಸಿ ನಿವಾ ಸಕ್ಕೆ ಹೊಂದಿಕೊAಡಿರುವ ತೋಟಗಾರಿಕೆ ಇಲಾಖೆ ಸ್ಥಳ ಮಂಜೂರು ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಹೊಸ ಕಟ್ಟಡಕ್ಕೆ ಜಿಲ್ಲಾಽಕಾರಿ ನಿವಾಸ ಮತ್ತು ಅದಕ್ಕೆ ಹೊಂದಿಕೊAಡಿರುವ ತೋಟಗಾರಿಕೆ ಇಲಾಖೆ ಸ್ಥಳವನ್ನೂ ಬಳಸಿಕೊಳ್ಳಲು ಯೋಜಿಸಲಾಗಿದೆ.
ಆದ್ದರಿಂದ ತೋಟಗಾರಿಕೆ ಇಲಾಖೆಯ ೬ ಎಕರೆ ಸ್ಥಳವನ್ನು ಕಟ್ಟಡ ನಿರ್ಮಾಣಕ್ಕೆ ಕೊಟ್ಟಲ್ಲಿ, ಈ ಸ್ಥಳದ ಬದಲಿಗೆ ತೋಟಗಾರಿಕೆ ಇಲಾಖೆಗೆ ಹೊಸ ಕಟ್ಟಡದಲ್ಲಿ ಸ್ಥಳಾವಕಾಶ ಒದಗಿಸಲಾಗುವುದು ಎಂದರು.
ಇಲಾಖೆ ನಿರ್ದೇಶಕ ಡಾ. ಗಿರೀಶ್ ಮಾತನಾಡಿ, ಇಲಾಖೆಗೆ ಸೇರಿದ ಸ್ಥಳ ನೀಡುವ ಬಗ್ಗೆ ಸರ್ಕಾರದ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಗುವುದು. ಈ ನಿಟ್ಟಿನಲ್ಲಿ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿಗೆ ಡಿಸಿ ಪ್ರಸ್ತಾವನೆ ಸಲ್ಲಿಸಿದರೆ ಸಾರ್ವಜನಿಕ ಹಿತ ದೃಷ್ಟಿ ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಡಿಸಿ ಟಿ.ವೆಂಕಟೇಶ್ ಮಾತನಾಡಿ, ಈ ಸಂಬAಧ ಜಿಲ್ಲಾ ಹಂತದಲ್ಲಿ ಸಭೆ ನಡೆಸಿ ಅಗತ್ಯ ದಾಖಲಾತಿಗಳೊಂದಿಗೆ ಪ್ರಸ್ತಾವನೆ ಯನ್ನು ಕಂದಾಯ ಇಲಾಖೆ ಮೂಲಕ ತೋಟಗಾರಿಕೆ ಇಲಾಖೆಗೆ ಸಲ್ಲಿಸಲಾಗುವುದು ಎಂದರು.
ಶಾಸಕರಾದ ಟಿ.ರಘುಮೂರ್ತಿ, ಎನ್.ವೈ. ಗೋಪಾಲಕÊಷ್ಣ, ಜಿಪಂ ಸಿಇಒ ಡಾ.ಎಸ್.ಆಕಾಶ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net