ಮಕ್ಕಳ ರಕ್ಷಣಾ ನೀತಿ ಅಸಮರ್ಪಕ ಅನುಷ್ಠಾನ

ಚಿತ್ರದುರ್ಗದಲ್ಲಿ ಗುರುವಾರ ಆಯೋಜಿಸಿದ್ದ ಮಕ್ಕಳ ರಕ್ಷಣೆ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ. ತಿಪ್ಪೇಸ್ವಾಮಿ ಉದ್ಘಾಟಿಸಿದರು. ಕೆ.ಎಚ್. ವಿಜಯಕುಮಾರ್, ಡಿ. ಮಂಜುನಾಥ್, ಜಗದೀಶ್, ರಂಗನಾಥ್, ಎ.ಎಂ. ವೀಣÁ ಇದ್ದರು.
ಚಿತ್ರದುರ್ಗದಲ್ಲಿ ಗುರುವಾರ ಆಯೋಜಿಸಿದ್ದ ಮಕ್ಕಳ ರಕ್ಷಣೆ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ. ತಿಪ್ಪೇಸ್ವಾಮಿ ಉದ್ಘಾಟಿಸಿದರು. ಕೆ.ಎಚ್. ವಿಜಯಕುಮಾರ್, ಡಿ. ಮಂಜುನಾಥ್, ಜಗದೀಶ್, ರಂಗನಾಥ್, ಎ.ಎಂ. ವೀಣÁ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ.ಕೆ.ಟಿ. ತಿಪ್ಪೇಸ್ವಾಮಿ ಅಸಮಾಧಾನ
  • ಕಾಯ್ದೆ ಕುರಿತು ತರಬೇತಿ ಕಾರ್ಯಾಗಾರ
  • ಕೃತಕ ಬುದ್ಧಿಮತ್ತೆ
ಚಿತ್ರದುರ್ಗ: ಕಳೆದ ಹತ್ತು ವರ್ಷಗಳ ಹಿಂದೆ ಜಾರಿಯಾಗಿದ್ದ ರಾಜ್ಯಮಕ್ಕಳ ರಕ್ಷಣಾ ನೀತಿ ಇವತ್ತಿಗೂ ಅನೇಕ ಶಿಕ್ಷಣ ಸಂಸ್ಥೆಗಳಲ್ಲಿ ಸರಿಯಾಗಿ ಅನುಷ್ಠಾ ನವಾಗಿಲ್ಲ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ. ತಿಪ್ಪೇಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ಆಯೋಗ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-೨೦೧೬(ಪರಿಷ್ಕರಣೆ ೨೦೨೩) ಹಾಗೂ ಮಕ್ಕಳ ರಕ್ಷಣಾ ಕಾಯ್ದೆ ಕುರಿತು ಪಾಲಿಟೆಕ್ನಿಕ್, ಐಟಿಐ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಪ್ರಾಚಾರ್ಯರಿಗೆ ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ೧೮ವರ್ಷದೊಳಗಿನ ಮಕ್ಕಳ ಸುರಕ್ಷತೆಗಾಗಿ ಜಾರಿಗೆ ತರಲಾಗಿರುವ ಮಕ್ಕಳ ರಕ್ಷಣಾ ನೀತಿ ಕಡ್ಡಾಯ ವಾಗಿ ಅನುಷ್ಠಾನಗೊಳ್ಳಬೇಕು. ವಿವಿಧ ಜಿಲ್ಲೆಗಳ ಐಟಿಐ, ಪ್ಯಾರಾಮೆಡಿಕಲ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಿಗೆ ತಾವು ಭೇಟಿ ನೀಡಿದ್ದ ಸಂದರ್ಭದ ಲ್ಲಿ ಮಕ್ಕಳ ರಕ್ಷಣಾ ನೀತಿ ಬಗ್ಗೆ ಅನೇಕ ಪ್ರಾಚಾರ್ಯರಿಗೆ ಮಾಹಿತಿಯೇ ಇಲ್ಲದಿರುವುದು ಗಮನಿಸಿದ್ದೇನೆ ಎಂದರು.
ಈ ನೀತಿ ಸರ್ಕಾರಿ ಶಾಲೆಗಳು, ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಹಾಗೂ ಖಾಸಗಿ ಟ್ಯೂಷನ್ ಕೇಂದ್ರಗಳಿಗೂ ಅನ್ವಯಿಸುತ್ತದೆ. ಪ್ರತಿ ಶಿಕ್ಷಣ ಸಂಸ್ಥೆಯಲ್ಲೂ ಕಡ್ಡಾಯವಾಗಿ ಮಕ್ಕಳ ರಕ್ಷಣಾ ಸಮಿತಿ ರಚಿಸಿರಬೇಕು. ಈ ಹಿಂದೆ ಶಿಕ್ಷಣ ಇಲಾಖೆಗೆ ಸೀಮಿತವಾಗಿದ್ದ ಮಕ್ಕಳ ರಕ್ಷನಾ ನೀತಿ, ಆಯೋಗದ ಕ್ರಮದಿಂದಾಗಿ ಈಗ ೧೧ ವಿವಿಧ ಇಲಾಖೆಗಳ ಮೂಲಕ ೩೦ ಪುಟಗಳ ಸಮಗ್ರ ಸುತ್ತೋಲೆಯಾಗಿ ಹೊರಬಂದಿದೆ. ಮಕ್ಕಳ ಮೇಲಿನ ದೌರ್ಜನ್ಯಗಳ ತಡೆ ಮತ್ತು ಅವರಿಗೆ ಸುರಕ್ಷಿತ ವಾತಾವರಣ ಒದಗಿಸಲು ಅಽಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಡಿಜಿಟಲ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಪ್ರಭಾವದಿಂದ ಮಕ್ಕಳ ಸಮಸ್ಯೆಗಳು ಜಟಿಲವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಕ್ಷಣÉಗೆ ರೂಪಿಸಲಾಗಿರುವ ಪಾಲಿಸಿಗಳನ್ನು ಕೇವಲ ದಾಖಲೆಗೆ ಸೀಮಿತಗೊಳಿಸದೆ, ಪ್ರಾಮಾಣಿಕವಾಗಿ ಜಾರಿಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್. ವಿಜಯಕುಮಾರ್ ಮಾತನಾಡಿ, ೧೮ ವರ್ಷದೊಳಗಿನ ಎಲ್ಲ ಮಕ್ಕಳ ಸುರಕ್ಷತೆ ಶಿಕ್ಷಣ ಸಂಸ್ಥೆಗಳ ಆದ್ಯತೆಯಾಗಬೇಕು. ವಿದ್ಯಾರ್ಥಿನಿಲಯ ಮತ್ತು ಶಾಲಾ, ಕಾಲೇಜುಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಯಾಗದಂತೆ ಎಚ್ಚರ ವಹಿಸಬೇಕು. ಮಕ್ಕಳ ಸುರಕ್ಷತೆ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವÊದ್ಧಿ ಇಲಾಖೆ ಜಿಲ್ಲಾ ನಿರೂಪಣಾಽಕಾರಿ ಡಿ. ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾ ದ ಜಗದೀಶ್, ರಂಗನಾಥ್, ಜಿಲ್ಲಾ ಮಕ್ಕಳ ರಕ್ಷಣಾಽಕಾರಿ ಎ.ಎಂ. ವೀಣಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net