ಮಾಸಿಕ ೫ ಸಾವಿರ ರೂ. ವೇತನ ಹೆಚ್ಚಿಸಿ

ರಾಜ್ಯ ಗ್ರಾಪಂಗಳ ಎಲ್ಲ ನೌಕರರಿಗೆ ಮಾಸಿಕ ೫ ಸಾವಿರ ರೂ. ವೇತನ ಹೆಚ್ಚಳ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿಗೆ ಒತ್ತಾಯಿಸಿ ಸಿಐಟಿಯು ಕಾರ್ಯಕರ್ತರು ಚಿತ್ರದುರ್ಗದಲ್ಲಿ ಗುರುವಾರ ಜಿಪಂ ಉಪ ಕಾರ್ಯದರ್ಶಿ ರಂಗಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಡಿ.ಎಂ. ಮಲಿಯಪ್ಪ, ರಂಗನಾಥ, ವೆಂಕಟೇಶ್, ಮಾರಪ್ಪ, ಶಶಿಕುಮಾರ್, ವಿಜಯಲಕ್ಷಿ÷್ಮÃ, ತಾರಮ್ಮ, ಚಂದ್ರಣ್ಣ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
  • ಸಿಐಟಿಯು ಜಿಲ್ಲಾ ಸಮಿತಿಯಿಂದ ಪ್ರತಿಭಟನೆ
  • ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ
ಚಿತ್ರದುರ್ಗ: ಭರವಸೆ ನೀಡಿದಂತೆ ಗ್ರಾಪಂಗಳ ಎಲ್ಲ ನೌಕರರಿಗೆ ಮಾಸಿಕ ೫ ಸಾವಿರ ರೂ. ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಽಕಾರಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ವೇತನ ಹೆಚ್ಚಳಕ್ಕೆ ಆದೇಶ ಹೊರಡಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಪಂ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು.
ಸರ್ಕಾರದ ಹಂತದಲ್ಲಿರುವ (ಪಾಲಿಸಿ ಮ್ಯಾಟರ್) ಬೇಡಿಕೆಗಳನ್ನು ಇತ್ಯರ್ಥಪಡಿಸುವ ಭರವಸೆ ಈವರೆಗೂ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ತಮ್ಮ ಮನವಿಗೆ ಸ್ಪಂದಿಸದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ. ಬೃಹತ್ ಸಂಖ್ಯೆಯಲ್ಲಿ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ನೌಕರರು ನಿವೃತ್ತಿ/ನಿಧನ ಹೊಂದಿದರೆ ಅವರಿಗೆ ೬ ಲಕ್ಷ ರೂ. ಇಡಿಗಂಟು ನೀಡಬೇಕು. ಸೇವಾ ಹಿರಿತನದ ಆಧಾರದಲ್ಲಿ ವೇತನ ನಿಗದಿಪಡಿಸಬೇಕು. ಸ್ವಚ್ಛವಾಹಿನಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಪ್ರತಿ ಪಂಚಾಯತಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುz್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಎರಡು ದಶಕಗಳಿಂದ ಡಾಟಾ ಎಂಟ್ರಿ ಆಪರೇಟರ್‌ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಅನುಮೋದನೆ ನೀಡಬೇಕು. ಈಗಾಗಲೇ ಆರೋಗ್ಯದ ಕುರಿತು ಸಿಬ್ಬಂದಿ ಮಾಹಿತಿಗಾಗಿ -Áರ್ಮೆಟ್ ಬಂದಿದೆ. ಅದರಲ್ಲಿ ಗುತ್ತಿಗೆ, ಹೊರಗುತ್ತಿಗೆ, ಗೌರವಧನದ, ಕಾರ್ಮಿಕರ ಮಾಹಿತಿ ನೀಡಲು ಸೂಚಿಸಲಾಗಿದೆ. ಆದರೆ, ಪಂಚಾಯಿತಿ ನೌಕರರೆಂಬ ಮಾಹಿತಿ ಇಲ್ಲ. ಕೂಡಲೇ ಇದನ್ನು ಸರಿಪಡಿಸಬೇಕು ಎಂದು ಕೋರಿದರು.
ಸಿಐಟಿಯು ಜಿಲ್ಲಾಧ್ಯಕ್ಷ ಡಿ.ಎಂ. ಮಲಿಯಪ್ಪ, ಪ್ರಧಾನ ಕಾರ್ಯದರ್ಶಿ ರಂಗನಾಥ, ಉಪಾಧ್ಯಕ್ಷ ವೆಂಕಟೇಶ್, ಮಾರಪ್ಪ, ಶಶಿಕುಮಾರ್, ವಿಜಯಲಕ್ಷಿ÷್ಮÃ, ತಾರಮ್ಮ, ಚಂದ್ರಣ್ಣ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net