ಚಿತ್ರದುರ್ಗದಲ್ಲಿ ಮಂಗಳವಾರ ಆಯೋಜಿಸಿದ್ದ ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜು ನೆಟ್‌ಬಾಲ್ ಪಂದ್ಯಾವಳಿಯನ್ನು ಎಡಿಸಿ ಬಿ.ಟಿ. ಕುಮಾರಸ್ವಾಮಿ ಉದ್ಘಾಟಿಸಿದರು. ಡಾ.ಜೆ. ಕರಿಯಪ್ಪ ಮಾಳಿಗೆ, ಪ್ರೊ.ಎಚ್. ತಿಪ್ಪೆಸ್ವಾಮಿ, ಡಾ.ಪಿ.ಎಸ್. ಮೇಘನಾ, ಡಾ.ಡಿ.ಆರ್. ಪ್ರಸನ್ನಕುಮಾರ್, ಭಾನುಪ್ರಕಾಶ್, ಮಾರ್ಟಿನ್ ಸ್ಯಾಮುಯೆಲ್ ಡಬ್ಲಯೂ, ಡಾ. ತಿಪ್ಪೇಸ್ವಾಮಿ ಇತರರು ಇದ್ದರು.
ದಾವಣಗೆರೆ ವಿಶ್ವವಿದ್ಯಾನಿಲಯ, ವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಆಶ್ರಯದಲ್ಲಿ ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ದಾವಣಗೆರೆ ವಿವಿ ಅಂತರ ಕಾಲೇಜುಗಳ ನೆಟ್‌ಬಾಲ್ ಪಂದ್ಯಾವಳಿ ಮತ್ತು ಆಯ್ಕೆ ಉದ್ಘಾಟಿಸಿ ಮಾತನಾಡಿದರು.
ಇಂದಿನ ಯುವಜನರು, ವಯಸ್ಕರು ದೇಸಿ ಕ್ರೀಡಾ ಪ್ರಕಾರಗಳನ್ನು ಮರೆಯುತ್ತಿದ್ದಾರೆ. ಗ್ರಾಮೀಣ ಪರಿಸರದಲ್ಲಿ ಮನರಂಜನೆಯ ಆಟಗಳು ಇಲ್ಲವಾಗಿವೆ. ಸ್ಮಾರ್ಟ್ಪೋನ್ ಬಳಕೆ ಹೆಚ್ಚಾಗಿ ನಮ್ಮಲ್ಲಿರುವ ಸೃಜನಶೀಲತೆ ನಿಧಾನ ವಾಗಿ ಕಡಿಮೆಯಾಗುತ್ತಿದೆ. ಅಧ್ಯಯನ, ಕ್ರಿಯಾಶೀಲತೆಯಿಂದ ದೂರವಾಗುತ್ತಿದ್ದೇವೆ. ಇಂತಹ ದೌರ್ಬಲ್ಯಗಳನ್ನು ಬದಿಗೊತ್ತಿ ಉತ್ತಮ ಜೀವನ ರೂಪಿಸಿಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ ಎಂದರು.
ಸರ್ಕಾರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ.ಜೆ. ಕರಿಯಪ್ಪ ಮಾಳಿಗೆ ಮಾತನಾಡಿ, ಯಾವುದೇ ಕ್ಷೇತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದರಿಂದ ಸಾಧನೆ ಹಾದಿ ಸುಲಭವಾಗುತ್ತದೆ. ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ತಾಯಿ ಪಾತ್ರ ವಹಿಸುತ್ತದೆ ಎಂದರು.
ದಾವಣಗೆರೆ ವಿವಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಎಚ್. ತಿಪ್ಪೆಸ್ವಾಮಿ ಮಾತನಾಡಿ, ಕ್ರೀಡೆಗಳು ನಮ್ಮ ಬದುಕಿಗೆ ಯಶಸ್ಸು ಹಾಗೂ ಬೆಳಕು ತಂದುಕೊಡುತ್ತವೆ. ಆದ್ದರಿಂದ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಸರ್ಕಾರಿ ಕಲಾ ಕಾಲೇಜು ಅಧ್ಯಾಪಕರ ಸಂಘದ ಜಂಟಿ ಕಾರ್ಯದರ್ಶಿ ಡಾ.ಪಿ.ಎಸ್. ಮೇಘನಾ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಡಿ.ಆರ್.ಪ್ರಸನ್ನಕುಮಾರ್, ಅರ್ಥಶಾಸö ಪ್ರಾಧ್ಯಾಪಕ ಭಾನುಪ್ರಕಾಶ್, ಪತ್ರಾಂಕಿತ ವ್ಯವಸ್ಥಾಪಕ ಮಾರ್ಟಿನ್ ಸ್ಯಾಮುಯೆಲ್ ಡಬ್ಲಯೂ, ಗ್ರಂಥಾಲಯಾಽಕಾರಿ ಡಾ.ತಿಪ್ಪೇಸ್ವಾಮಿ ಇತರರು ಇದ್ದರು.