ಸಮಾಜದ ಶಾಂತಿಗೆ ಈಶ್ವರೀಯ ವಿಶ್ವವಿದ್ಯಾಲಯ ಪ್ರಯತ್ನ

 ಚಿತ್ರದುರ್ಗ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಶ್ರೀ ಶಿವಲಿಂಗಾನAದ ಸ್ವಾಮೀಜಿ ಉದ್ಘಾಟಿಸಿದರು. ಡಾ. ಬಸವಕುಮಾರ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,ಶ್ರೀ ಬ್ರಹ್ಮನಿಷ್ಠಾನಂದ ಸ್ವಾಮೀಜಿ,ಅಭಿಷೇಕ ದೇವರು,ಶಿವರಶ್ಮಿ, ಗಾಯತ್ರಿ ಇದ್ದರು.
ಚಿತ್ರದುರ್ಗ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಶ್ರೀ ಶಿವಲಿಂಗಾನAದ ಸ್ವಾಮೀಜಿ ಉದ್ಘಾಟಿಸಿದರು. ಡಾ. ಬಸವಕುಮಾರ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,ಶ್ರೀ ಬ್ರಹ್ಮನಿಷ್ಠಾನಂದ ಸ್ವಾಮೀಜಿ,ಅಭಿಷೇಕ ದೇವರು,ಶಿವರಶ್ಮಿ, ಗಾಯತ್ರಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶ್ರೀ ಶಿವಲಿಂಗಾನAದ ಸ್ವಾಮೀಜಿ ಅನಿಸಿಕೆ
  • ಬಸವ ಜಯಂತಿ ಕಾರ್ಯಕ್ರಮ
  • ಕಾರ್ಯವೈಖರಿ
ಚಿತ್ರದುರ್ಗ:ವಿಶ್ವದ ನೂರಾರು ದೇಶಗಳಲ್ಲಿ ಸೇವಾ ಕೇಂದ್ರಗಳನ್ನು ಹೊಂದಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿ ದ್ಯಾಲಯ ಜ್ಞಾನ ಮತ್ತು ಧ್ಯಾನದ ಮೂಲಕ ಸಮಾಜದಲ್ಲಿ ಶಾಂತಿ ಸ್ಥಾಪಿಸಲು ಶ್ರಮಿಸುತ್ತಿದೆ ಎಂದು ನಗರದ ಶ್ರೀ ಕಬೀರಾನಂ ದಾಶ್ರಮದ ಶ್ರೀ ಶಿವಲಿಂಗಾನAದ ಸ್ವಾಮೀಜಿ ಹೇಳಿದರು.
ನಗರದ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವವಿದ್ಯಾಲಯದ ನವ ದಶಮಾನೋತ್ಸವ, ಬಸವ ಜ ಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈಶ್ವರೀಯ ವಿಶ್ವವಿದ್ಯಾಲಯದ ಸಾಧಕಿಯರ ಕಾರ್ಯವೈಖರಿಯನ್ನು ಶ್ಲಾಘಿ ಸಿದರು.
ಮುರುಘಾಮಠದ ಆಡಳಿತ ಮಂಡಳಿ ಸದಸ್ಯ ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿ, ಬಸವಣ್ಣನವರ ತತ್ವಾದರ್ಶಗಳನ್ನು ಬ್ರಹ್ಮ ಕುಮಾರಿಯರು ತಮ್ಮ ಜೀವನದಲ್ಲಿ ಸಂಪೂರ್ಣವಾಗಿ ಅಳವಡಿಸಿಕೊಂಡಿದ್ದಾರೆ ಎಂದರು.
ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಬಸವಣ್ಣ ೧೨ನೇ ಶತಮಾನದಲ್ಲಿ ಮಹಿಳೆಯರಿಗೆ ಸಮಾನತೆಯ ಸ್ವಾತಂತ್ರ‍್ಯ ಕೊಟ್ಟಿದ್ದರಿಂದ ೨೧ನೇ ಶತಮಾನದಲ್ಲಿ ಮಹಿಳೆಯರು ಎಲ್ಲ ರಂಗದಲ್ಲೂ ಸಾಧನೆ ಮಾಡುತ್ತಿದ್ದಾರೆ ಎಂದರು.
ನಗರದ ಶ್ರೀ ರಾಮಕೃಷ್ಣಾಶ್ರಮದ ಶ್ರೀ ಬ್ರಹ್ಮನಿಷ್ಠಾನಂದ ಸ್ವಾಮೀಜಿ ಅವರು ಬಸವಣ್ಣನವರ ವಚನಗಳ ಕುರಿತು ಮಾತನಾಡಿ ದರು. ಹಿರಿಯೂರಿನ ರಾಜಯೋಗ ಶಿಕ್ಷಕಿ ಈಶ್ವರೀಯ ವಿಶ್ವವಿದ್ಯಾಲಯದ ಗಾಯತ್ರಿ, ಶಿವರಶ್ಮಿ, ವಿಮಲಾ ಹಾಗೂ ಅಭಿಷೇಕ ದೇ ವರು ಇದ್ದರು. ನವೀನ್‌ಮಸ್ಕಲ್ ನಿರೂಪಿಸಿದರು. ಬಸವಜಯಂತಿ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net