ಚಿತ್ರದುರ್ಗ: ಜಿಲ್ಲಾಡಳಿತ, ಜಿಪಂ, ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಫೆ.೧ರಂದು ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.
ವಿವಿಧ ಕಂಪನಿಗಳು ಅಭ್ಯರ್ಥಿಗಳ ಸಂದರ್ಶನಕ್ಕೆ ಅನುಕೂಲವಾಗುವಂತೆ ಕೊಠಡಿಗಳನ್ನು ಸಜ್ಜುಗೊಳಿಸಲಾಗಿದೆ. ಅಭ್ಯರ್ಥಿಗಳಿಗೆ ಗೊಂದಲವಾಗದAತೆ ಮಾಹಿತಿ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ.
ಐಟಿ, ಬಿಟಿ, ಮೆಕ್ಯಾನಿಕಲ್, ಆಟೋಮೊಬೈಲ್ ಸೇರಿದಂತೆ ವಿವಿಧ ಕ್ಷೇತ್ರಗಳ ೧೦೦ ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಪಾಲ್ಗೊ ಳ್ಳಲಿವೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಗಡಿಭಾಗದ ಅಭ್ಯರ್ಥಿಗಳಿಗೆ ಅನುಕೂಲ ವಾಗುವಂತೆ ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಯಿAದ ಬೆೆಂಗಳೂರು, ತುಮಕೂರು, ಶಿವಮೊಗ್ಗ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ಪ್ರಮುಖ ಕಂಪನಿಗಳನ್ನು ಮೇಳಕ್ಕೆ ಆಹ್ವಾನಿಸಲಾಗಿದೆ. ಬಿಇ ಪದವೀಧರರಿಗಾಗಿ ಪ್ರತಿಷ್ಠಿತ ಐಟಿ ಕಂಪನಿಗಳು ಈ ಬಾರಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ ಹಾಗೂ ಇತರೆ ಯಾವುದೇ ವಿದ್ಯಾರ್ಹತೆ ಹೊಂದಿರುವ ೧೮-೩೫ ವರ್ಷ ವಯೋಮಿತಿಯೊಳಗಿನ ನಿರುದ್ಯೋಗಿ ಯುವಜನರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಪ್ರತಿ ಅಭ್ಯರ್ಥಿ ಕನಿಷ್ಠ ೫ರಿಂದ ೬ ರೆಸ್ಯೂಮ್ ಪ್ರತಿ ಹಾಗೂ ಪೂರಕ ದಾಖಲೆಗಳೊಂದಿಗೆ ಹಾಜರಾಗಬೇಕು.
ಈಗಾಗಲೇ ೬೨೫೦ಕ್ಕೂ ಅಽಕ ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಇವರಲ್ಲಿ ೩೧೧೦ಕ್ಕೂ ಹೆಚ್ಚು ಪುರುಷ ಹಾಗೂ ೩,೧೦೦ ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳು ಇದ್ದಾರೆ. ೧೭೩೯ಕ್ಕೂ ಹೆಚ್ಚು ಪರಿಶಿಷ್ಟ ಜಾತಿ, ೧೦೪೨ಕ್ಕೂ ಹೆಚ್ಚು ಪರಿಶಿಷ್ಟ ಪಂಗಡ, ೨೩೨೬ಕ್ಕೂ ಹೆಚ್ಚು ಹಿಂದುಳಿದ ವರ್ಗ, ೧೨೯ ಅಲ್ಪ ಸಂಖ್ಯಾತ, ೯೭೭ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ನೋಂದಾಯಿಸಿದ್ದಾರೆ.
ನೋಂದಾಯಿತರಲ್ಲಿ ಬಿಎಎಂಎಸ್, ಬಿಇ, ಕೃಷಿ ಹಾಗೂ ತೋಟಗಾರಿಕೆ ಸ್ನಾತಕೋತ್ತರ ಪದವಿ, ಎಂಎಸ್ಸಿ, ಎಂಎ, ಬಿ.ಎಡ್, ಪದವಿ, ಬಿ. ಫಾರ್ಮಾಸಿ, ನರ್ಸಿಂಗ್, ಡಿಪ್ಲೊಮಾ, ಐಟಿಐ, ಪಿಯುಸಿ, ಎಸ್‌ಎಸ್‌ಎಲ್‌ಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿ ರುವವರು ಇದ್ದಾರೆ.
ಉದ್ಯೋಗಕಾಂಕ್ಷಿಗಳು ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಡಿಸಿ ಟಿ. ವೆಂಕಟೇಶ್, ಜಿಪಂ ಸಿಇಒ ಡಾ.ಎಸ್. ಆಕಾಶ್ ಮನವಿ ಮಾಡಿದ್ದಾರೆ. ಯುವನಿಽ ಫಲಾನುಭವಿಗಳು ತಪ್ಪದೇ ಮೇಳದಲ್ಲಿ ಭಾಗವಹಿಸುವಂತೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಽಕಾರದ ಅಧ್ಯಕ್ಷ ಆರ್. ಶಿವಣ್ಣ ಕೋರಿದ್ದಾರೆ.