ಚಿತ್ರದುರ್ಗ ಎಸ್‌ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ `ಎಸ್‌ಆರ್‌ಎಸ್ ಯುವ ತರಂಗ' -ಸಾಂಸ್ಕೃತಿಕ ಮಹಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಂಸದ ಗೋವಿಂದ ಎಂ. ಕಾರಜೋಳ ಅವರನ್ನು ಗೌರವಿಸಲಾಯಿತು. ಬಿ.ಎ. ಲಿಂಗಾರೆಡ್ಡಿ, ಬಿ.ಎಲ್. ಅಮೋಘ್, ಡಾ.ಜೆ. ಸುಜಯ್, ಜಿ.ಎಸ್. ಅನಿತ್‌ಕುಮಾರ್, ಮಾಧುರಿ ಗಿರೀಶ್, ಡಾ.ಟಿ.ಎಸ್. ರವಿ ಇತರರಿದ್ದರು.
ಚಿತ್ರದುರ್ಗ: ರಾಷ್ಟç ಮಟ್ಟದಲ್ಲಿ ಅಳವಡಿಸಿರುವ ಎನ್‌ಇಪಿ ತ್ರಿಭಾಷಣ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲೂ ಅಳವಡಿಸಬೇಕಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದರು.
ನಗರದ ಎಸ್‌ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಗಳು ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ೪ ದಿನಗಳ `ಎಸ್‌ಆರ್‌ಎಸ್ ಯುವ ತರಂಗ-೨೦೨೫' ಸಾಂಸ್ಕೃತಿಕ ಮಹಾ ಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿದರು.
ಎನ್‌ಇಪಿಯನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿದರೆ ಕರ್ನಾಟಕದ ವಿದ್ಯಾರ್ಥಿಗಳಿಗೆ ರಾಷ್ಟçಮಟ್ಟದಲ್ಲಿ ಪೈಪೋಟಿ ನೀಡಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ಯುವ ಮುಖಂಡ ಜಿ.ಎಸ್. ಅನಿತ್‌ಕುಮಾರ್ ಮಾತನಾಡಿ, ಮರೆಯಾಗುತ್ತಿರುವ ನಮ್ಮ ಭವ್ಯ ಸಂಸ್ಕೃತಿಯನ್ನು ವಿದ್ಯಾರ್ಥಿ, ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಎಸ್‌ಆರ್‌ಎಸ್ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಬಸವೇಶ್ವರ ಮೆಡಿಕಲ್ ಕಾಲೇಜು ಹೃದ್ರೋಗ ಹಾಗೂ ಶ್ವಾಸಕೋಶ ತಜ್ಞ ಡಾ.ಜೆ. ಸುಜಯ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಆತ್ಮ ವಿಶ್ವಾಸದಿಂದ ಸವಾಲು ಎದುರಿಸಿ ತಮ್ಮ ಗುರಿ ತಲುಪಬೇಕು. ಈ ಮೂರು ತತ್ವಗಳು ಯಾವುದೇ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಲಿಂಗಾರೆಡ್ಡಿ ಮಾತನಾಡಿ, ಮರೆತಿರುವ ಗತವೈಭವವನ್ನು ನಾವಿಂದು ನೆನಪಿಸಿಕೊಳ್ಳಬೇಕಿದೆ. ನಮ್ಮ ಸಂಸ್ಥೆ ನಿರಂತರವಾಗಿ ವಿದ್ಯಾಭ್ಯಾಸದ ಜತೆಗೆ ಮಕ್ಕಳಿಗೆ ಭವ್ಯ ಮೌಲ್ಯಗಳನ್ನು ಪರಿಚಯಿಸುವ ಕಾರ್ಯ ಮಾಡುತ್ತಾ ಬಂದಿದೆ. ಇದನ್ನು ಮುಂದುವರಿಸುವುದಾಗಿ ಹೇಳಿದರು.
ಸಂಸ್ಥೆ ಕಾರ್ಯದರ್ಶಿ ಸುಜಾತಾ ಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ.ಎಲ್. ಅಮೋಘ್, ಆಡಳಿತಾಽಕಾರಿ ಡಾ.ಟಿ.ಎಸ್. ರವಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಾಧುರಿಗಿರೀಶ್ ಇತರರು ಇದ್ದರು.