ದೇಶಕ್ಕೆ ಕೊಡುಗೆ ನೀಡಿ ಬದುಕು ಸಾರ್ಥಕ ಮಾಡಿಕೊಳ್ಳಿ

ಚಳ್ಳಕೆರೆ ನಗರದ ವೀರಶೈವ ಲಿಂಗಾಯತ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಮಹಾ ಸ್ವಾಮೀಜಿ, ಸಂಸದ ಗೋವಿಂದ ಕಾರಜೋಳ, ಶಾಸಕ ಟಿ. ರಘುಮೂರ್ತಿ, ಎಂಎಲ್ಸಿ ಕೆ.ಎಸ್. ನವೀನ್ ಇದ್ದರು.
ಚಳ್ಳಕೆರೆ ನಗರದ ವೀರಶೈವ ಲಿಂಗಾಯತ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಮಹಾ ಸ್ವಾಮೀಜಿ, ಸಂಸದ ಗೋವಿಂದ ಕಾರಜೋಳ, ಶಾಸಕ ಟಿ. ರಘುಮೂರ್ತಿ, ಎಂಎಲ್ಸಿ ಕೆ.ಎಸ್. ನವೀನ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶ್ರೀ ಗುರುಶಾಂತೇಶ್ವರ ಸ್ವಾಮೀಜಿ ಸಲಹೆ
  • ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ
ಚಳ್ಳಕೆರೆ: ವಿದ್ಯಾರ್ಥಿಗಳು ದೇಶದ ಪ್ರಗತಿಗೆ ಏನಾದರೂ ಕೊಡುಗೆ ನೀಡುವ ಮೂಲಕ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು ಎಂದು ನೆಗಳೂರು ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ನಗರದ ವೀರಶೈವ ಲಿಂಗಾಯತ ಕಲ್ಯಾಣ ಮಂಟಪದಲ್ಲಿ ಭಾನುವಾರ ತಾಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ, ವೀರಶೈವ ಸಮಾಜ ಸೇವಾ ಸಂಘ ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಈಗಿನ ಮಕ್ಕಳು ಹುಟ್ಟಿದ ನೆಲದ ಋಣ ತೀರಿಸುವ ಸಂಕಲ್ಪ ಮಾಡಬೇಕು. ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ದಿಸೆಯಿಂದಲೇ ಪ್ರಶ್ನಿಸುವುದು ಕಲಿತಿದ್ದ ಅಬ್ದುಲ್ ಕಲಾಂ ದೇಶದ ರಾಷ್ಟ್ರಪತಿಯಾಗಿ ಸೇವೆ ಮಾಡಿದ್ದಾರೆ ಎಂದು ಹೇಳಿದರು.
ಲಿಂಗಾಯತ ಧರ್ಮ ಎಲ್ಲರನ್ನೂ ಗೌರವಿಸುತ್ತದೆ. ಕೊರಳಲ್ಲಿ ರುದ್ರಾಕ್ಷಿ, ಎದೆಯ ಮೇಲೆ ಲಿಂಗ, ಹಣೆಯಲ್ಲಿ ವಿಭೂತಿ ಧರಿಸುವ ಪದ್ಧತಿಯನ್ನೂ ರೂಢಿಸಿಕೊಳ್ಳುವ ಮಮೂಲಕ ಧರ್ಮವನ್ನು ರಕ್ಷಿಸಿಕೊಳ್ಳಬೇಕಿದೆ ಎಂದು ಹೇಳಿದರು.
ಸಂಸದ ಗೋವಿಂದ ಕಾರಜೋಳ ಮಾತನಾಡಿ, ಲಿಂಗಾಯತ ಧರ್ಮಕ್ಕೆ ವಿಶಾಲವಾದ ಅರ್ಥ ಇದೆ. ಕಾಯಕದಿಂದ ಜಾತಿ ಗುರುತಿಸಬಾರದು. ಪ್ರತಿಭೆಗಳನ್ನು ಒಂದು ಜಾತಿ, ವರ್ಗಕ್ಕೆ ಸೀಮಿತಗೊಳಿಸಬಾರದು. ವಿದ್ಯಾರ್ಥಿಗಳು ಪಾಲಕರು ಮತ್ತು ಶಿಕ್ಷಕರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಮಂಜೂರಾತಿ ಸೇರಿ, 80 ಸಾವಿರ ಇದ್ದ ವೈದ್ಯ ಸೀಟುಗಳನ್ನು 1.5 ಲಕ್ಷಕ್ಕೆ ಹೆಚ್ಚಳ ಮಾಡಿದ್ದಾರೆ. ಇದನ್ನು ವಿಧ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಶಾಸಕ ಟಿ. ರಘುಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿಯಾಗಿ ಬೆಳೆಯಬೇಕು. ಹೆಚ್ಚಿನ ಅಂಕಗಳಿಕೆಗೆ ಸೀಮಿತರಾಗದೆ ಮೌಲ್ಯಾಧಾರಿತ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ತಾಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ. ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸಿ. ನಾಗರಾಜ್, ವೀರಶೈವ ವಿದ್ಯಾರ್ಥಿ ನಿಲಯ ಅಧ್ಯಕ್ಷ ಎನ್. ಸತೀಶ್‌ಬಾಬು, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿದರು.
ಟಿ. ಪ್ರಭುದೇವ್, ಡಿ.ಟಿ. ರವೀಂದ್ರ, ಡಾ. ಕೆ.ಎಂ. ಜಯಕುಮಾರ್, ಡಾ.ಜಿ.ವಿ. ರಾಜಣ್ಣ, ಡಾ. ಚೌಳೂರು ಲೋಕೇಶ್, ಮಾತೃಶ್ರೀ ಮಂಜುನಾಥ್, ಎಚ್.ವಿ. ಪ್ರಸನ್ನ ಕುಮಾರ್, ಬಿ.ಎಸ್. ಶಿವಪುತ್ರಪ್ಪ, ಕೊಂಡ್ಲಹಳ್ಳಿ ರೇವಣ್ಣ, ಕೆ.ಎಂ. ಪ್ರಕಾಶ್, ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net