ಚಿತ್ರದುರ್ಗ ನಗರದ ಸಮಗ್ರ ಅಭಿವೃದ್ಧಿಗೆ ಶಾಸಕ ತಾಕೀತು

ಚಿತ್ರದುರ್ಗದಲ್ಲಿ ಸೋಮವಾರ ಆಯೋಜಿಸಿದ್ದ ಕುಡಾ ಸಾಮಾನ್ಯ ಸಭೆಯಲ್ಲಿ ಶಾಸಕ ಕೆ.ಸಿ. ವೀರೇಂದ್ರಪಪ್ಪಿ, ಎಂಎಲ್‌ಸಿ ಕೆ.ಎಸ್. ನವೀನ್, ಪ್ರಾಽಕಾರದ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಆಯುಕ್ತ ಸೋಮಶೇಖರ್, ನಗರಸಭೆ ಆಯುಕ್ತೆ ಎಸ್.ಲಕ್ಷಿ÷್ಮÃ ಇತರರು ಇದ್ದರು.
ಚಿತ್ರದುರ್ಗದಲ್ಲಿ ಸೋಮವಾರ ಆಯೋಜಿಸಿದ್ದ ಕುಡಾ ಸಾಮಾನ್ಯ ಸಭೆಯಲ್ಲಿ ಶಾಸಕ ಕೆ.ಸಿ. ವೀರೇಂದ್ರಪಪ್ಪಿ, ಎಂಎಲ್‌ಸಿ ಕೆ.ಎಸ್. ನವೀನ್, ಪ್ರಾಽಕಾರದ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಆಯುಕ್ತ ಸೋಮಶೇಖರ್, ನಗರಸಭೆ ಆಯುಕ್ತೆ ಎಸ್.ಲಕ್ಷಿ÷್ಮÃ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಚಿತ್ರದುರ್ಗ ನಗರದ ಸಮಗ್ರ ಅಭಿವೃದ್ಧಿಗೆ ಶಾಸಕ ತಾಕೀತು
  • ಮಠದ ಕೆರೆ ಕಾಮಗಾರಿ ವಿಳಂಬಕ್ಕೆ ಅತೃಪ್ತಿ
  • ಐತಿಹಾಸಿಕ ಹಿನ್ನೆಲೆ
ಚಿತ್ರದುರ್ಗ: ಐತಿಹಾಸಿಕ ಹಿನ್ನೆಲೆಯ ಚಿತ್ರದುರ್ಗ ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ,ಪ್ರವಾಸಿಗರನ್ನು ಆಕರ್ಷಿಸುವಂತೆ ಮಾಡುವುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.
ಸೋಮವಾರ ನಗರಾಭಿವೃದ್ಧಿ ಪ್ರಾಽಕಾರದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಐತಿಹಾಸಿಕ ಪ್ರವಾಸಿ ತಾಣವಾಗಿರು ವ ಏಳು ಸುತ್ತಿನ ಕಲ್ಲಿನ ಕೋಟೆ ವೀಕ್ಷಣೆಗೆ ನಿತ್ಯ ಸಾವಿರಾರು ಪ್ರವಾಸಿಗರು ಚಿತ್ರದುರ್ಗಕ್ಕೆ ಬರುತ್ತಿದ್ದಾರೆ. ಆದ್ದರಿಂದ ನಗರವನ್ನು ಅಭಿವೃದ್ಧಿ ಪಡಿಸಬೇಕಿದೆ. ಇದಕ್ಕಾಗಿ ಅಽಕಾರಿಗಳು ಕೈಜೋಡಿಸಬೇಕು ಎಂದರು.
ತುರುವನೂರಿನಲ್ಲಿ ನಿರ್ಮಿತಿ ಕೇಂದ್ರ ನಿರ್ಮಿಸಿರುವ ಮಾದರಿ ಉದ್ಯಾನದಂತೆ ನಗರದ ಮಧ್ಯಭಾಗದಲ್ಲೂ ಸುಂದರ ಪಾರ್ಕ್ ನಿರ್ಮಿಸಬೇಕು. ಪ್ರಮುಖ ರಸ್ತೆಗಳಲ್ಲಿ ಸೋಲಾರ್ ಬೀದಿ ದೀಪಗಳನ್ನು ಅಳವಡಿಸಿ ರಾತ್ರಿ ವೇಳೆಯಲ್ಲೂ ನಗರ ಆಕರ್ಷಕವಾಗಿ ಕಾಣುವಂತೆ ಮಾಡಬೇಕೆಂದು ಸೂಚಿಸಿದರು.
ಮುರುಘಾ ಮಠದ ಕೆರೆ ಅಭಿವೃದ್ಧಿ ವಿಚಾರದಲ್ಲಿ ಅಽಕಾರಿಗಳು ನಿರ್ಲಕ್ಷ್ಯ ತೋರಬಾರದು. ಕೆರೆಗೆ ತ್ಯಾಜ್ಯ ಸೇರ್ಪಡೆ ತಡೆಗೆ ಕ್ರಮ ಕೈಗೊಂಡು ಅದನ್ನು ಉತ್ತಮ ಪ್ರವಾಸಿ ತಾಣವನ್ನಾಗಿ ರೂಪಿಸಬೇಕು. ಸಂಬAಽಸಿದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
ನಗರದ ಐತಿಹಾಸಿಕ ಪುಷ್ಕರಣಿಗಳ ಅಭಿವೃದ್ಧಿಗೂ ಆದ್ಯತೆ ನೀಡಬೇಕು. ಪ್ರಾಽಕಾರ ಹಾಗೂ ನಗರಸಭೆ ಅಽಕಾರಿಗಳು ಜಂಟಿ ಅಧ್ಯಯನ ನಡೆಸಿ ಸಂಪೂರ್ಣ ವರದಿಯನ್ನು ಮುಂದಿನ ಸಭೆಯಲ್ಲಿ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಲ್ಲಾಸ್ಪತ್ರೆಯ ಸ್ವಾಮಿ ವಿವೇಕಾನಂದ ಉದ್ಯಾನವನ್ನು ಅಭಿವೃದ್ಧಿಪಡಿಸಬೇಕು. ಉದ್ಯಾನದೊಳಗೆ ಕೆಲವು ವರ್ತಕರು ಕಸ ಹಾಕು ತ್ತಿರುವ ದೂರುಗಳಿವೆ. ಈ ಸಂಬAದ ಅಗತ್ಯ ಕ್ರಮ ಜರುಗಿಸಬೇಕು. ಉದ್ಯಾನದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಸ್ಥಾಪಿಸು ವುದರೊಂದಿಗೆ, ನಗರದ ವಿವಿಧ ಉದ್ಯಾನಗಳನ್ನೂ ಅಭಿವÊದ್ಧಿಪಡಿಸಬೇಕೆಂದು ತಾಕೀತು ಮಾಡಿದರು.
ನಗರ ಪ್ರವೇಶ ದ್ವಾರಗಳಲ್ಲಿ ಆಕರ್ಷಕ ಸ್ವಾಗತ ಫಲಕಗಳನ್ನು ನಿರ್ಮಿಸಬೇಕು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು. ತಿಮ್ಮಣ್ಣ ನಾಯಕನ ಕೆರೆಯನ್ನು ಸಂಪರ್ಕಿಸುವ ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕು. ಸಾರ್ವಜನಿಕರ ದೂರುಗಳಿಗೆ ಸಂಬAಽಸಿದ ಅಽಕಾರಿಗಳು ಕೂಡಲೇ ಸ್ಪಂದಿಸಬೇಕು ಎಂದು ಸೂಚಿಸಿದರು.
ಎಂಎಲ್‌ಸಿ ಕೆ.ಎಸ್. ನವೀನ್ ಮಾತನಾಡಿದರು. ಕುಡಾ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಸದಸ್ಯರಾದ ದೇವರಾಜ್, ಅಂಜಿನಪ್ಪ, ಸುರೇಶ್, ಆಯುಕ್ತ ಸೋಮಶೇಖರ್, ನಗರಸಭೆ ಆಯುಕ್ತೆ ಎಸ್. ಲಕ್ಷಿ÷್ಮÃ, ಡಿಎಚ್‌ಒ ಡಾ.ಎನ್. ಕಾಶಿ, ಮಲ್ಲೇಶ್‌ನಾಯಕ್ ಮತ್ತಿತರ ಅಽಕಾರಿಗಳು ಇದ್ದರು.
ಹೊಸ ಯೋಜನೆ:
ಚಿತ್ರದುರ್ಗದ ಅಭಿವೃದ್ಧಿಗೆ ಪ್ರಾಽಕಾರ ಹೊಸ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. ನಗರದ ವೈಶಿಷ್ಟ್ಯವನ್ನು ಪ್ರತಿಬಿಂಬಿಸುವAಥ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವುದು ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಸಲಹೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net