ಚಿತ್ರದುರ್ಗದಲ್ಲಿ ಶನಿವಾರ ಆಯೋಜಿಸಿದ್ದ ಖಜಾನೆ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಖಜಾನೆ ಉಪ ನಿರ್ದೇಶಕ ಎಚ್.ಟಿ. ಅಶೋಕ್ ಉದ್ಘಾಟಿಸಿದರು. ಏಳುಕೋಟಿ, ನರಸಿಂಹಮೂರ್ತಿ, ರಮೇಶ್, ಮದನ್, ತಿಪ್ಪೇಸ್ವಾಮಿ ಇತರರು ಇದ್ದರು.
ಚಿತ್ರದುರ್ಗ: ವರ್ಷವಿಡೀ ಕಚೇರಿ ಕೆಲಸದ ಒತ್ತಡದಲ್ಲಿರುವ ಸಿಬ್ಬಂದಿಗೆ ಕ್ರೀಡಾಕೂಟಗಳು ಹೊಸ ಚೈತನ್ಯ ನೀಡುತ್ತವೆ ಎಂದು ಜಿಲ್ಲಾ ಖಜಾನೆ ಇಲಾಖೆ ಉಪ ನಿರ್ದೇಶಕ ಎಚ್.ಟಿ. ಅಶೋಕ್ ಹೇಳಿದರು.
ನಗರದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲೆಯ ಖಜಾನೆ ನೌಕರರ ವಾರ್ಷಿಕ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡಿ, ಆಟೋಟೊಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ, ದೈಹಿಕ ಆರೋಗ್ಯ ಕ್ಷಮತೆ ಹೆಚ್ಚುತ್ತದೆ ಎಂದರು.
ಕ್ರಿಕೆಟ್, ವಾಲಿಬಾಲ್, ಥ್ರೋಬಾಲ್, ಡಿಸ್ಕಸ್ ಥ್ರೋ, ಗುಂಡು ಎಸೆತ, ೧೦೦ ಮೀಟರ್ ಓಟ ಹಾಗೂ ಒಳಾಂಗಣ ಕ್ರೀಡೆಗಳಾದ ಚೆಸ್ ಮತ್ತು ಕೇರಂ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಪದಕ, ಪಾರಿತೋಷಕ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಖಜಾನೆ ಇಲಾಖೆ ಸಹಾಯಕ ನಿರ್ದೇಶಕರಾದ ಏಳುಕೋಟಿ, ನರಸಿಂಹಮೂರ್ತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ರಮೇಶ್, ಮದನ್,ತಿಪ್ಪೇಸ್ವಾಮಿ ಮತ್ತಿತರರು ಇದ್ದರು.