ಸರ್ಕಾರಿ ಶಾಲೆ ಮುಚ್ಚುವ ಸರ್ಕಾರದ ಕ್ರಮಕ್ಕೆ ವಿರೋಧ

ಚಿತ್ರದುರ್ಗ ತಾಲೂಕಿನ ಮಾನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಚ್ಚಲು ಮುಂದಾಗಿರುವ ಕ್ರಮದ ವಿರುದ್ಧ ಗ್ರಾಮಸ್ಥರು, ಎಐಡಿಎಸ್‌ಒ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಕೆ. ಈರಣ್ಣ, ಮಹಾಂತೇಶ್ವರಪ್ಪ, ಗೌರಮ್ಮ, ಈಶ್ವರಪ್ಪ, ಲತಾ, ಪುಷ್ಪ, ಸರಸ್ವತಿ, ರಂಗಸ್ವಾಮಿ ಇತರರಿದ್ದರು.
ಚಿತ್ರದುರ್ಗ ತಾಲೂಕಿನ ಮಾನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಚ್ಚಲು ಮುಂದಾಗಿರುವ ಕ್ರಮದ ವಿರುದ್ಧ ಗ್ರಾಮಸ್ಥರು, ಎಐಡಿಎಸ್‌ಒ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಕೆ. ಈರಣ್ಣ, ಮಹಾಂತೇಶ್ವರಪ್ಪ, ಗೌರಮ್ಮ, ಈಶ್ವರಪ್ಪ, ಲತಾ, ಪುಷ್ಪ, ಸರಸ್ವತಿ, ರಂಗಸ್ವಾಮಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾನಂಗಿ ಗ್ರಾಮಸ್ಥರು, ಎಐಡಿಎಸ್‌ಒ ಕಾರ್ಯಕರ್ತರಿಂದ ಪ್ರತಿಭಟನೆ
  • ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ
ವಿಜಯವಾಣಿ ಸುದ್ದಿಜಾಲ ಚಿತ್ರದುರ್ಗ
ತಾಲೂಕಿನ ಮಾನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಗ್ರಾಮಸ್ಥರು, ಎಐಡಿಎಸ್‌ಒ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಕೆ. ಈರಣ್ಣ ಮಾತನಾಡಿ, ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ 6 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಈ ಜಿಲ್ಲೆಯ ಶಾಲೆಗಳ ವಿಲೀನಕ್ಕೆ ಹುನ್ನಾರ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಈ ತೀತ ಆದರೆ ಮಕ್ಕಳ ಓಡಾಟಕ್ಕೆ ತುಂಬಾ ತೊಂದರೆಯಾಗಲಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಹೋರಾಟದ ಮೂಲಕ ತಡೆಯದಿದ್ದರೆ, ಸರ್ಕಾರಿ ಶಾಲೆಗಳಿಗೆ ಉಳಿಗಾಲವಿಲ್ಲ ಎಂದು ಎಚ್ಚರಿಸಿದರು.
ಹಲವು ಮಹನೀಯರ ಹೋರಾಟ ಮತ್ತು ಪರಿಶ್ರಮದ ಫಲವಾಗಿ ಹಳ್ಳಿಗಳಲ್ಲಿ ಸರ್ಕಾರಿ ಶಾಲೆಗಳು ಆರಂಭವಾಗಿವೆ. ಆದರೆ, ಅವರ ಆಶಯಗಳನ್ನು ಗಾಳಿಗೆ ತೂರಿ ಶಾಲೆಗಳನ್ನು ಮುಚ್ಚುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಸರ್ಕಾರ ಶಿಕ್ಷಣದ ಜವಾಬ್ದಾರಿಯಿಂದ ನುಣುಚಿಕೊಳ್ಳಲು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬುಡಮೇಲು ಮಾಡಲು ಕಾರ್ಪೊರೇಟ್‌ಗಳ ಪರವಾಗಿ ಹುನ್ನಾರ ರೂಪಿಸಿದಂತಿದೆ ಎಂದು ದೂರಿದರು.
ಇತ್ತೀಚೆಗೆ ಅರಸೀಕೆರೆ ತಾಲೂಕಿನಲ್ಲಿ ಸರ್ಕಾರಿ ಶಾಲೆ ಮುಚ್ಚುವುದಕ್ಕೆ ಆದೇಶ ಹೊರಡಿಸಿದೆ. ರಾಮನಗರ ಜಿಲ್ಲೆಯ ಪಾದರಹಳ್ಳಿಯಲ್ಲಿ ಕೆಪಿಎಸ್ ಶಾಲೆ ಮಾಡಿ, ಅದರ ಸುತ್ತಮುತ್ತಲಿನ ಶಾಲೆಗಳನ್ನು ಮುಚ್ಚುವುದಕ್ಕೆ ಸರ್ಕಾರಿ ಶಿಕ್ಷಕರು ಪಾಲಕರಿಗೆ ಸುಳ್ಳು ಹೇಳಿ, ಮುಚ್ಚಳಿಕೆ ಪತ್ರಕ್ಕೆ ಹೆಬ್ಬೆಟ್ಟು ಹಾಕಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ಈಶ್ವರಪ್ಪ ಮಾತನಾಡಿ, ಮಾನಂಗಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಡ ಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಇದನ್ನು ಮುಚ್ಚಿದರೆ, ಖಾಸಗಿ ಶಾಲೆಗಳಿಗೆ ಹೋಗಿ ಶಿಕ್ಷಣ ಪಡೆಯುವುದು ಅಸಾಧ್ಯ. ಆದ್ದರಿಂದ ಶಾಲೆಯ ಬಾಗಿಲು ಮುಚ್ಚಬಾರದು ಎಂದು ಆಗ್ರಹಿಸಿದರು.
ಗ್ರಾಮಸ್ಥರಾದ ಮಹಾಂತೇಶ್ವರಪ್ಪ, ಲತಾ, ಪುಷ್ಪ, ಸರಸ್ವತಿ, ರಂಗಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷೆ ಗೌರಮ್ಮ ಹಾಗೂ ವಿದ್ಯಾರ್ಥಿಗಳು ಇದ್ದರು.
(ಸಿಟಿಡಿ ಕೆಪಿಎಸ್ ಸ್ಕೂಲ್ ಪ್ರೊಟೆಸ್ಟ್)
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net