ರಾಜ್ಯ ಸರ್ಕಾರದ ನಡೆ ವಿರುದ್ಧ ಆಕ್ರೋಶ

 ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಹೊರಟಿದೆ ಎಂದು ಆರೋಪಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಚಿತ್ರದುರ್ಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಮಹಾಂತೇಶ್ ಬಿಳೂರು, ಕೆ. ಈರಣ್ಣ,ನಿಖಿಲ್, ಭರತ್, ಶಂಕರ್, ವೀರೇಶ್, ಪ್ರದೀಪ್, ಮಗದೀರ್, ಹೇಮಂತ್ ಇತರರು ಇದ್ದರು.
ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಹೊರಟಿದೆ ಎಂದು ಆರೋಪಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಚಿತ್ರದುರ್ಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಮಹಾಂತೇಶ್ ಬಿಳೂರು, ಕೆ. ಈರಣ್ಣ,ನಿಖಿಲ್, ಭರತ್, ಶಂಕರ್, ವೀರೇಶ್, ಪ್ರದೀಪ್, ಮಗದೀರ್, ಹೇಮಂತ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಆರೋಪ
  • ದುರ್ಗದಲ್ಲಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
  • ಕೆಪಿಎಸ್ ಮ್ಯಾಗ್ನೆಟ್ ಶಾಲೆ
ಚಿತ್ರದುರ್ಗ: ರಾಜ್ಯದಲ್ಲಿ ೪೦ ಸಾವಿರಕ್ಕೂ ಅಽಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆ ವಿ ರುದ್ಧ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್‌ಒ)ನೇತÊತ್ವದಲ್ಲಿ ಗುರುವಾರ ನಗರದ ಒನಕೆ ಓಬವ್ವ ವೃತ್ತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಸಂಘಟನೆ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಬಿಳೂರು ಮಾತನಾಡಿ, ರಾಜ್ಯದಲ್ಲಿ ಒಂದೇ ಒಂದು ಶಾಲೆ ಮುಚ್ಚುವು ದಿಲ್ಲವೆಂದು ಸರ್ಕಾರ ಹೇಳುತ್ತಿದೆ. ಆದರೆ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ರಾಜ್ಯ ಸರ್ಕಾರ ೪೦ ಸಾವಿರಕ್ಕೂ ಅಽಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಸರ್ಕಾರದ ದಾಖಲೆಗಳೇ ಹೇಳುತ್ತಿವೆ ಎಂದು ಆರೋಪಿಸಿದರು.
ಗ್ರಾಪಂಗೆ ಒಂದರAತೆ ರಾಜ್ಯದಲ್ಲಿ ೬೦೦೦ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಸ್ಥಾಪನೆ ಗುರಿ ಸರ್ಕಾರದ ಮುಂದಿದೆ. ಚಿತ್ರದುರ್ಗ ಜಿಲ್ಲೆ ಯೊಂದರಲ್ಲೇ ೧೧೫೨ ಶಾಲೆಗಳನ್ನು ಮುಚ್ಚಲು ಪಟ್ಟಿ ಮಾಡಲಾಗಿದೆ. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಹೆಸರಲ್ಲಿ ಬಡ ಮಕ್ಕಳನ್ನು ಶಾಶ್ವತವಾಗಿ ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಮಹನೀಯರ ಆಶಯಗಳೀಗೆ ವಿರುದ್ಧವಾಗಿ ಸರ್ಕಾರ ಶಿಕ್ಷಣ ಕ್ಷೇತ್ರದ ಮೇಲೆ ಪ್ರಹಾರ ನಡೆಸಿದೆ ಎಂದ ಅವರು, ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಸಂಘಟನೆ ಹೋರಾಟ ತೀವ್ರಗೊಳಿಸಲಿದೆ ಎಂದು ಎಚ್ಚರಿಸಿದರು. ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಕೆ. ಈರಣ್ಣ, ನಿಖಿಲ್, ಭರತ್, ಶಂಕರ್, ವೀರೇಶ್, ಪ್ರದೀಪ್, ಮಗದೀರ್, ಹೇಮಂತ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net