ಬೆಲೆ ಏರಿಕೆ ವಿರುದ್ಧ ಬಿಜೆಪಿ ಆಕ್ರೋಶ

ಹನುಮಂತೇಗೌಡ
ಹನುಮಂತೇಗೌಡ
Published on

ಪ್ರಮುಖ ಮುಖ್ಯಾಂಶಗಳು

  • ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ
  • ಬೆಲೆ ಏರಿಕೆ
ಚಿತ್ರದುರ್ಗ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದಾಗಿನಿAದಲೂ ಜನಸಾಮಾನ್ಯರ ಗೋಳು ಕೇಳುವವರಿಲ್ಲದಂತಾಗಿದೆ ಎಂದು ಬಿಜೆಪಿ ಪ್ರಮುಖ ಹನುಮಂತೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಆಡಳಿತಾವಽಯಲ್ಲಿ ಬೆಲೆ ಏರಿಕೆ ನಿರಂತರವಾಗಿದೆ. ಇದೀಗ ನಂದಿನಿ ತುಪ್ಪ, ಮೊಸರಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದರಿಂದ ಜನ ಸಾಮಾನ್ಯರು ಹೈರಾಣಾಗುತ್ತಿದ್ದಾರೆ ಎಂದು ಆರೋಪಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜನೆ ಕುರಿತಂತೆ ಆರ್‌ಎಸ್‌ಎಸ್ ಗಮನದಲ್ಲಿ ಇಟ್ಟುಕೊಂಡು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ತಡೆ ಹಿಡಿದೆ. ಸುಪ್ರೀಂಕೋರ್ಟ್ಗೆ ಹೋದರೂ ಪ್ರಯತ್ನ ಫಲಿಸದು ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net