ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಗೊಡಬನಾಳ್ ಗ್ರಾಮದಲ್ಲಿ ಕೆ.ಸಿ. ವೀರೇಂದ್ರಪಪ್ಪಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಶಿವಣ್ಣ, ಸಂತೋಷ್, ಶಿವಮೂರ್ತಿ, ಜೈಶೀಲಾ ಇತರರಿದ್ದರು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಗೊಡಬನಾಳ್ ಗ್ರಾಮದಲ್ಲಿ ಕೆ.ಸಿ. ವೀರೇಂದ್ರಪಪ್ಪಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಶಿವಣ್ಣ, ಸಂತೋಷ್, ಶಿವಮೂರ್ತಿ, ಜೈಶೀಲಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ವೀರೇಂದ್ರಪಪ್ಪಿ ಭರವಸೆ
  • ವಿವಿಧೆಡೆ ಆರ್‌ಒ ಘಟಕ ನಿರ್ಮಾಣಕ್ಕೆ ಭೂಮಿ ಪೂಜೆ
  • ಕುಡಿಯುವ ನೀರಿನ ಸಮಸ್ಯೆ
ಚಿತ್ರದುರ್ಗ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ, ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡುವುದಾಗಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭರವಸೆ ನೀಡಿದರು.
ತಾಲೂಕಿನ ಗೊಡಬನಹಾಳ್, ಚೆನ್ನಯ್ಯನಹಟ್ಟಿ ಹಾಗೂ ಚಿಕ್ಕಪುರ ಗೊಲರಹಟ್ಟಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಗಳ ನಿರ್ಮಾಣಕ್ಕೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕುಡಿಯುವ ನೀರು, ಬೀದಿ ದೀಪ, ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ನನ್ನ ಮೇಲಿದೆ. ಪ್ರತಿ ಗ್ರಾಮದಲ್ಲೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದರು.
ಕ್ಷೇತ್ರದ ಯಾವ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಽಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಹಲವೆಡೆ ಆರ್‌ಒ ಘಟಕಗಳ ಕೊರತೆ ಇರುವುದನ್ನು ಮನಗಂಡು ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಕ್ಷೇತ್ರದ ಹಲವು ಗ್ರಾಮಗಳಲ್ಲಿ ಈಗಾಗಲೇ ಸಿ.ಸಿ. ರಸ್ತೆ, ಕೊಳವೆಬಾವಿ, ವಿದ್ಯುತ್ ಸಂಪರ್ಕ, ಚರಂಡಿ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಅಽಕಾರ ಸಿಕ್ಕಾಗ ಜನೋಪಯೋಗಿ ಕೆಲಸಗಳನ್ನು ಮಾಡಬೇಕು. ಆಗ ಮಾತ್ರ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ. ಕ್ಷೇತ್ರ ಗಣಿಬಾಽತ ಪ್ರದೇಶಗಳನ್ನು ಒಳಗೊಂಡಿದ್ದು, ಡಿಎಂಎ-ï ಅನುದಾನದಡಿ ಸಮಗ್ರ ಪ್ರಗತಿಗೆ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.
ಮಳೆಗಾಲ ಆರಂಭವಾಗಿದ್ದು, ಚರಂಡಿಗಳನ್ನು ಸ್ವಚ್ಛಗೊಳಿಸುವ ಮೂಲಕ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿ¯್ಲÁಧ್ಯಕ್ಷ ಶಿವಣ್ಣ, ಕೆಡಿಪಿ ಸದಸ್ಯ ಸಂತೋಷ್, ಆರ್‌ಡಬ್ಲ್ಯುಎಸ್ ಮುಖ್ಯ ಇಂಜಿನಿ ಯರ್ ಶಿವಮೂರ್ತಿ, ಲಕ್ಷಿ÷್ಮÃಸಾಗರ ಗ್ರಾಪಂ ಪಿಡಿಒ ಜೈಶೀಲಾ, ಕಾಂಗ್ರೆಸ್ ಮುಖಂಡರಾದ ಮಂಜಣ್ಣ, ಚಿತ್ತಪ್ಪ, ರಂಗಸ್ವಾಮಿ, ಹನುಮಂತಪ್ಪ, ಕೃಷ್ಣಪ್ಪ, ನಾಗರಾಜ್, ಚಿದಾನಂದಪ್ಪ, ವೀರೇಶ್, ಸತೀಶ್, ಮಹೇಶ್, ಸತೀಶ್‌ಕುಮಾರ್, ನವೀನ್, ತಿಪ್ಪೇಶ್, ಮಂಜುನಾಥ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net