ಕರ್ನಾಟಕ ವಿರೋಽ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ರಮೇಶ್, ಚಂದ್ರಕಲಾ, ವಿಜಯಕುಮಾರ್, ದಾದಾಪೀರ್, ಬಸವರಾಜು, ಜಾಕೀರ್, ಮಂಜುಳಾ, ಜಯಲಕ್ಷಿ÷್ಮÃ ಇತರರು ಇದ್ದರು.
ಚಿತ್ರದುರ್ಗ: ಕರ್ನಾಟಕ ವಿರೋಽ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು. ಕರವೇ ಮನವಿಗೆ ಸ್ಪಂದಿ ಸುವAತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ರವಾನಿಸಿದರು.
ರಾಜ್ಯ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರ ಮರುಪರಿಶೀಲಿಸುವಂ ತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿz್ದÁರೆ. ಇದರ ಹಿಂದೆ ರಾಜ್ಯದಲ್ಲಿ ಶಾಶ್ವತವಾಗಿ ಹಿಂದಿ ಹೇರಿಕೆ ಮುಂದು ವರಿಸುವ ಹುನ್ನಾರ ಅಡಗಿದೆ ಎಂದು ದೂರಿದರು.
ರಾಜ್ಯಪಾಲರ ನಡೆ ಹಿಂದಿ ಭಾಷಿಗರ ಪರ ಕಾರ್ಯ ನಿರ್ವಹಿಸುತ್ತಿರುವಂತೆ ಕಾಣುತ್ತ್ತಿದೆ. ಕನ್ನಡಿಗರ ಮೇಲೆ ಹಿಂದಿ ಹೇರಲು ಯತ್ನಿಸುತ್ತಿದ್ದು, ಕರ್ನಾಟಕದಲ್ಲಿ ಅವರು ಏಕೆ ಇರಬೇಕು. ಕೂಡಲೇ ವಜಾಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.