ಕೆಪಿಎಸ್‌ಸಿ ಹಗರಣ ಸಿಬಿಐಗೆ ವಹಿಸಿ

 ಕೆಪಿಎಸ್‌ಸಿ ಹಗರಣ ಸಿಬಿಐಗೆ ವಹಿಸುವಂತೆ, ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಕೆಪಿಎಸ್‌ಸಿ ಹಗರಣ ಸಿಬಿಐಗೆ ವಹಿಸುವಂತೆ, ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಉಪನ್ಯಾಸಕರ ಸಮಸ್ಯೆ ಪರಿಹರಿಸಿ
  • ಎಬಿವಿಪಿ, ನೂರಾರು ವಿದ್ಯಾರ್ಥಿಗಳಿಂದ ರಸ್ತೆ ತಡೆ ಪ್ರತಿಭಟನೆ
  • ರಾಜ್ಯ ಸರ್ಕಾರಕ್ಕೆ ಮನವಿ

ಚಿತ್ರದುರ್ಗ:

ಕೆಪಿಎಸ್‌ಸಿ ನೇಮಕಾತಿ ಹಗರಣ, ಅವ್ಯವಹಾರಗಳಿಂದ ಲಕ್ಷಾಂತರ ಅಭ್ಯರ್ಥಿಗಳ ಭವಿಷ್ಯ ಕತ್ತಲಲ್ಲಿದೆ. ಕೂಡಲೇ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಹಾಗೂ ನೂರಾರು ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಇತ್ತೀಚೆಗೆ ಮುನ್ನೆಲೆಗೆ ಬಂದಿರುವ ಈ ಹಗರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಽಸಬೇಕು. ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು.
ನಗರ, ಗ್ರಾಮಾಂತರ ಪ್ರದೇಶಗಳಿಂದ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಬಸ್‌ಗಳು ಸಿಗದೆ ಪರದಾಡುತ್ತಿ ದ್ದಾರೆ. ಪಾಸ್‌ಗಳಿದ್ದರೂ ನಿರ್ವಾಹಕರು ಹತ್ತಿಸಿಕೊಳ್ಳುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗಿದೆ. ಕೂಡಲೇ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಬೇಕು. ಪರೀಕ್ಷಾ ಸಂದರ್ಭಗಳಲ್ಲಿ ಸಮಯಕ್ಕೆ ಅನುಗುಣವಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸ ಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಡಿ. ದೇವರಾಜ ಅರಸು, ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಮೂಲ ಸೌ ಕರ್ಯಗಳನ್ನು ಒದಗಿಸಬೇಕು. ತಕ್ಷಣವೇ ಎಲ್ಲ ಪದವಿ ಕಾಲೇಜುಗಳಿಗೆ ಅಗತ್ಯವಿರುವ ಉಪನ್ಯಾಸಕರನ್ನು ನೇಮಿಸಿ, ವಿದ್ಯಾ ರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು. ವಿಳಂಬ ಮಾಡದೆ, ಅವರಿಗೆ ಗೌರವಧನ ನೀಡಬೇಕೆಂದು ಒತ್ತಾಯಿಸಿ ದರು.

ಪದಾಽಕಾರಿಗಳಾದ ಕನಕರಾಜ್ ಕೋಡಿಹಳ್ಳಿ, ಗೋಪಿ, ಸಂಜಯ್, ಕುಬೇರ, ಆದರ್ಶ್, ಟಿ. ಸುದೀಪ್, ಮಲ್ಲಿಕಾರ್ಜುನ್, ಜೀವನ್, ಹರಿಪ್ರಸಾದ್, ಪ್ರಶಾಂತ್, ನಿಹಾರಿಕಾ, ಚಂದನಾ, ಅಮೂಲ್ಯಾ ಇತರರಿದ್ದರು.

ಬಂಧನ, ಬಿಡುಗಡೆ
ನಗರದ ಬಿ.ಡಿ. ರಸ್ತೆಯ ವೀರ ಯೋಧ ಚೈತನ್ಯ ವೃತ್ತದಲ್ಲಿ ರಸ್ತೆ ತಡೆ ನಡೆಸಲು ಮುಂದಾದ ಎಬಿವಿಪಿಯ ಕೆಲ ಕಾರ್ಯಕರ್ತರನ್ನು ಪೊಲೀಸರು ಬಂಽಸಿ, ಬಿಡುಗಡೆಗೊಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net