ಚಿತ್ರದುರ್ಗ: ಜಿಲ್ಲೆಯಲ್ಲಿ ೨೦೨೬-೨೭ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ -Àಸ ಲ್ ಭೀಮಾ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಗ್ರಾಪಂ ಮಟ್ಟದ ವಿಮಾ ಘಟಕಕ್ಕೆ ಚಳ್ಳಕೆರೆ ತಾಲೂಕಿಗೆ ಶೇಂಗಾ, ಚಿತ್ರದುರ್ಗ-ಮುಸುಕಿನ ಜೋಳ, ಹಿರಿಯೂರು-ಶೇಂಗಾ ಮತ್ತು ಸೂರ್ಯಕಾಂತಿ, ಹೊಳಲ್ಕೆರೆ-ಮುಸುಕಿನ ಜೋಳ ಮತ್ತು ರಾಗಿ, ಮೊಳಕಾಲ್ಮೂರು- ಶೇಂಗಾ, ಹೊಸದುರ್ಗ ತಾಲೂಕಿಗೆ ರಾಗಿ (ಮಳೆಯಾಶ್ರಿತ ಬೆಳೆಗಳನ್ನು ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಅಽಸೂಚಿಸಲಾಗಿದೆ).
ಇದರೊಂದಿಗೆ ಹೋಬಳಿ ಮಟ್ಟದಲ್ಲಿ ಹತ್ತಿ, ಹೆಸರು, ಹುರುಳಿ, ಈರುಳ್ಳಿ, ಭತ್ತ, ಸಜ್ಜೆ, ತೊಗರಿ, ಕೆಂಪು ಮೆಣಸಿನಕಾಯಿ, ಟೊಮ್ಯಾ ಟೊ ಸೇರಿ ಹಲವು ನೀರಾವರಿ ಹಾಗೂ ಮಳೆಯಾಶ್ರಿತ ಬೆಳೆಗಳನ್ನು ವಿಮೆಗೆ ಒಳಪಡಿಸಲಾಗಿದೆ. ತಮ್ಮ ಹೋಬಳಿ ಮಟ್ಟದ ಬೆಳೆ ವಿವರವನ್ನು ಸಂಬAಽಸಿದ ಕೃಷಿ ಅಽಕಾರಿಗಳು, ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು.
ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ಬೆಳೆ ವಿಮೆಗೆ ನೋಂದಣಿ ಮಾಡಲು ಹೆಸರು(ಮಳೆಯಾಶ್ರಿತ) ಮತ್ತು ಈರುಳ್ಳಿ (ನೀರಾವರಿ)ಗೆ ಜು.೧೫ ಕೊನೇ ದಿನವಾಗಿದೆ.
ಹತ್ತಿ, ಮೆಕ್ಕೆಜೋಳ, ಶೇಂಗಾ, ಜೋಳ,(ನೀರಾವರಿ, ಮಳೆಯಾಶ್ರಿತ) ಹುರುಳಿ, ಈರುಳ್ಳಿ, ಸಜ್ಜೆ, ತೊಗರಿ, ಕೆಂಪು ಮೆಣಸಿನಕಾಯಿ, ಸಾವೆ, ಎಳ್ಳು, ಸೂರ್ಯಕಾಂತಿ (ಮಳೆಯಾಶ್ರಿತ) ಹಾಗೂ ಟೊಮ್ಯಾ ಟೊ ಬೆಳೆಗಳಿಗೆ ಜುಲೈ ೩೧ ಕೊನೆಯ ದಿನವಾಗಿದೆ.
ನವಣೆ(ಮಳೆಯಾಶ್ರಿತ), ಭತ್ತ (ನೀರಾವರಿ), ರಾಗಿ(ಮಳೆಯಾಶ್ರಿತ ಮತ್ತು ನೀರಾವರಿ)ಬೆಳೆಗಳಿಗೆ ಆಗಸ್ಟ್ ೧೪ ಕೊನೇ ದಿನ.
ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಪಡೆದ ಎಲ್ಲ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುತ್ತದೆ. ಒಂದು ವೇಳೆ ಸಾಲ ಪಡೆದ ರೈತರು ವಿಮೆಯಿಂದ ಹೊರಗುಳಿಯಲು ಇಚ್ಛಿಸಿದರೆ, ನೋಂದಣಿ ಅಂತಿಮ ದಿನಾಂಕಕ್ಕಿAತ ೭ ದಿನ ಮುಂಚಿತ ವಾಗಿ ಬ್ಯಾಂಕ್ ವ್ಯವಸ್ಥಾಪಕರಿಗೆ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಬೇಕು. ಇನ್ನು ಸಾಲ ಪಡೆಯದ ರೈತರು ಬೆಳೆ ಸಾಲ ಪಡೆಯ ದೇ ಇರುವ ಬಗ್ಗೆ ಸ್ವಯಂ ಘೋಷಣÉ ನೀಡುವುದು ಕಡ್ಡಾಯವಾಗಿದೆ.
ಚಿತ್ರದುರ್ಗ ಜಿಲ್ಲೆಗೆ ಇ-ÉÆ್ಕÃ ಟೋಕಿಯೋ ಜನರಲ್ ಇನ್ಶೂರೆನ್ಸ್ ಕಂಪನಿ ಅನುಷ್ಠಾನ ಸಂಸ್ಥೆಯಾಗಿದ್ದು, ರೈತರು ನೋಂದಣಿ ಗೆ ಕಡ್ಡಾಯವಾಗಿ ಊ್ಕಖಿಐSಖ ಐಈ (ಊಐಈ) ಹೊಂದಿರಬೇಕು. ಆಸಕ್ತ ರೈತರು ತಮ್ಮ ವ್ಯಾಪ್ತಿಯ ಬ್ಯಾಂಕುಗಳಲ್ಲಿ ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬಹುದು.
ಆರ್ಥಿಕ ಸಂಸ್ಥೆಗಳು, ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಾಯಿಸಿದಾಗ ಬೆಳೆ ವಿಮೆ ಪ್ರಸ್ತಾವನೆಯನ್ನು ಹಾಗೂ ವಿಮಾ ಕಂತನ್ನು ನಿಗದಿತ ಸಮಯದೊಳಗೆ ನಿಯಮಾನುಸಾರ ಅನುಷ್ಠಾನ ವಿಮಾ ಸಂಸ್ಥೆಗಳಿಗೆ ವರ್ಗಾಯಿಸಲು ಕ್ರಮಕೈಗೊಳ್ಳಬೇಕು. ನೋಂದಣಿ ಪ್ರಕ್ರಿಯೆ ಹಂತದಲ್ಲಿ ಸಂಸ್ಥೆಗಳ ನಿರ್ಲಕ್ಷ್ಯದಿಂದ ಯಾವುದೇ ಲೋಪದೋಷಗ ಳಾದಲ್ಲಿ ಅದರಿಂದಾಗುವ ಬೆಳೆ ವಿಮೆ ಪರಿಹಾರ ವ್ಯಾಜ್ಯಗಳಿಗೆ ಸಂಬAಽಸಿದ ಸಂಸ್ಥೆಗಳೇ ನೇರ ಹೊಣೆಗಾರರಾಗಿರುತ್ತಾರೆ.
ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ನೋಂದಣಿ ಮಾಡಿಸಬೇಕು. ಅಂತಿಮ ಸಮಯದಲ್ಲಿ ಜನದಟ್ಟಣೆಯಿಂದಾಗಿ ತಪ್ಪುಗಳಾಗಿ, ವಿಮೆ ಪರಿಹಾರ ಬಾರದಿರುವ ಸಂಭವವಿದೆ. ಆದ್ದರಿಂದ ಸಕಾಲದಲ್ಲಿ ನೋಂದಣಿ ಮಾಡಿಸುವಂತೆ ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ್ ಕೋರಿದ್ದಾರೆ.