ನಿವೃತ್ತರ ಮೇಲಿದೆ ಸಮಾಜ ತಿದ್ದುವ ಜವಾಬ್ದಾರಿ

ಚಿತ್ರದುರ್ಗ ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಮಾತನಾಡಿದರು. ಜಿ.ಬಿ. ಮಹಾಂತೇಶ್, ಬಿ.ಕೆ. ಹನುಮಂತಪ್ಪ, ಪರಮೇಶ್, ಹಾಲನಾಯ್ಕ, ಲಕ್ಷಿ÷್ಮÃನಾರಾಯಣ, ನಾಗರಾಜ್ ಇತರರು ಇದ್ದರು.
ಚಿತ್ರದುರ್ಗ ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಮಾತನಾಡಿದರು. ಜಿ.ಬಿ. ಮಹಾಂತೇಶ್, ಬಿ.ಕೆ. ಹನುಮಂತಪ್ಪ, ಪರಮೇಶ್, ಹಾಲನಾಯ್ಕ, ಲಕ್ಷಿ÷್ಮÃನಾರಾಯಣ, ನಾಗರಾಜ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಚಿತ್ರದುರ್ಗ ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘ
  • ಮನೋರಂಜನಾ ಹಾಗೂ ಸಾಂಸ್ಕೃತಿಕ ಸಂಘ
  • ವಾರ್ಷಿಕ ಸಭೆ
ಚಿತ್ರದುರ್ಗ: ಸಮಾಜ ತಿದ್ದುವ ಬಹುದೊಡ್ಡ ಜವಾಬ್ದಾರಿ ನಿವೃತ್ತ ಸರ್ಕಾರಿ ನೌಕರರ ಹೆಗಲ ಮೇಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಹೇಳಿದರು.
ಚಿತ್ರದುರ್ಗ ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘ, ಮನೋರಂಜನಾ ಹಾಗೂ ಸಾಂಸ್ಕೃತಿಕ ಸಂಘದಿAದ ನಗರದ ಕ್ರೀಡಾ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ವಾರ್ಷಿಕ ಸಭೆ ಮತ್ತು ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳೊAದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಸರ್ಕಾರಿ ನೌಕರಿಯಲ್ಲಿ ನೀವು ಸಲ್ಲಿಸಿದ ಸೇವೆಯಿಂದ ಅಭಿವೃದ್ಧಿ ಕಾಣುತ್ತಿದ್ದೇವೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಬೇರೆ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತ ೨ ಎಕರೆ ಜಮೀನು ನೀಡಿದೆ. ಮುಂದಿನ ದಿನಗಳಲ್ಲಿ ನೌಕರರ ಭವನ ನಿರ್ಮಿಸಲಾಗುವುದು. ನಿವೃತ್ತ ನೌಕರರಿಗೂ ಇದು ಪ್ರ ಯೋಜನವಾಗಲಿ. ನಮ್ಮ ಸಂಘ ಸದಾ ನಿಮ್ಮ ಜತೆಯಲ್ಲಿ ಇರುತ್ತದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ. ಮಹಾಂತೇಶ್ ಮಾತನಾಡಿ, ನಿವೃತ್ತ ನೌಕರರ ಮಾರ್ಗದರ್ಶನದಿಂದ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ಪ್ರಾಮಾಣಿಕವಾಗಿ ಶಿಕ್ಷಕರ ಸೇವೆ ಮಾಡಿದ್ದರಿಂದ ೨ನೇ ಬಾರಿಗೆ ಸಂಘದ ಅಧ್ಯಕ್ಷನಾಗಿದ್ದೇನೆ
ಎಂದರು.
ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಕೆ. ಹನುಮಂತಪ್ಪ ಮಾತನಾಡಿ, ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪ ರೀಕ್ಷೆಯಲ್ಲಿ ಹೆಚ್ಚಿನ ಅಂಕಗಳೊAದಿಗೆ ಉತ್ತೀರ್ಣರಾಗುವಂಥ ನಿವೃತ್ತ ನೌಕರರ ಸಂಘದ ಸದಸ್ಯರ ಮಕ್ಕಳು, ಮೊಮ್ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಇದಕ್ಕೆ ದಾನಿಗಳು ಮುಂದೆ ಬರಬೇಕು. ನಿವೃತ್ತ ನೌಕರರು ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಪರಮೇಶ್, ಖಜಾಂಚಿ ಹಾಲನಾಯ್ಕ, ನಿರ್ದೇಶಕ ಲಕ್ಷಿ÷್ಮÃನಾರಾಯಣ ನಿವೃತ್ತ ಸಬ್ ಇನ್ಸ್ಪೆಕ್ಟರ್ ನಾಗರಾಜ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net