ಲೋಕೋಪಯೋಗಿ ಇಲಾಖೆ ರಾ.ಹೆ.ವಿಭಾಗದ ನಿವೃತ್ತ ಸಿಇ ಕೆ.ಜಿ.ಜಗದೀಶ್ ದಂಪತಿಯನ್ನು ಶುಕ್ರವಾರ ಚಿತ್ರದುರ್ಗದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಕೆ.ಮಲ್ಲೇಶಪ್ಪ, ಎಂ.ರಮೇಶ್ ಇತರರು ಇದ್ದರು.
ಚಿತ್ರದುರ್ಗ: ಕಚೇರಿಗೆ ಬರುವ ಸಾರ್ವಜನಿಕರಿಗೆ ಸರ್ಕಾರಿ ಅಽಕಾರಿ ಹಾಗೂ ಸಿಬ್ಬಂದಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ಲೋಕೋಪಯೋಗಿ ರಾ.ಹೆ.ಬೆಂಗಳೂರು ವಲಯದ ನಿವೃತ್ತ ಮುಖ್ಯ ಇಂಜಿನಿಯರ್ ಕೆ.ಜಿ.ಜಗದೀಶ್ ಹೇಳಿದರು.
ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜಿಲ್ಲಾ ಗುತ್ತಿಗೆದಾರರ ಸಂಘ, ಲೋಕೋಪಯೋಗಿ, ಸಣ್ಣ ನೀರಾವರಿ ಇಲಾ ಖೆಗಳು, ಕುಡಿಯುವ ನೀರು ಪೂರೈಕೆ ಯೋಜನೆ, ಪಂ.ರಾಜ್ ಇಂಜಿನಿಯರಿAಗ್ ಹಾಗೂ ನಿರ್ಮಿತಿ ಕೇಂದ್ರದ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಅಽಕಾರ ಜನರ ಸೇವೆಗೆಂಬ ಮನವರಿಕೆ ಮಾಡಿಕೊಳ್ಳಬೇಕು. ನಿವೃತ್ತಿ ನಂತರದಲ್ಲೂ ಈ ಜಿಲ್ಲೆಗೆ ನನ್ನ ಸೇವೆ ಮುಂದುವರಿಯಲಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಅಽÃಕ್ಷಕ ಇಂಜಿನಿಯರ್ ಎಂ.ರಮೇಶ್ ಮಾತನಾಡಿ, ನಿವೃತ್ತಿ ನಂತರ ಜೀವನ ಕಷ್ಟಕರ ವಾಗಿರುತ್ತದೆ. ಸುಮ್ಮನೆ ಕುಳಿತು ಕಾಲ ಕಳೆಯುವುದು ಬೇಸರ. ನಿವೃತ್ತರ ಸಲಹೆ, ಸಹಕಾರವನ್ನು ಇಂಜಿನಿಯರ್‌ಗಳು ಪಡೆದು ಕೊಳ್ಳುವುದು ಉತ್ತಮ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಮಾತನಾಡಿ, ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಗೆ ತಮ್ಮ ಸೇವೆ ಮುಂದುವರಿಯಲಿ ಎಂದು ಜಗದೀಶ್ ಅವರಿಗೆ ಮನವಿ ಮಾಡಿದರು.
ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲೇಶಪ್ಪ, ನಿವೃತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಂಗನಾಥ್ ಮಾತನಾಡಿದರು.
ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಬಿ.ಎಸ್.ಹರೀಶ್‌ಕುಮಾರ್, ಕಾರ್ಯಪಾಲಕ ಇಂಜಿನಿಯರ್‌ಗಳಾದ ಆರ್.ನಾಗರಾಜ್, ಎಲ್.ಹನುಮಂತಪ್ಪ, ಕೆ.ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.