ಎಸ್‌ಜೆಎಂ ವಿದ್ಯಾಪೀಠದಿಂದ ಮಧ್ಯ ಕರ್ನಾಟಕದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ
ಹೊಳಲ್ಕೆರೆ ಒಂಟಿಕAಬದ ಮುರುಘಾಮಠದಲ್ಲಿ ಶನಿವಾರ ಆಯೋಜಿಸಿದ್ದ ಲಿಂ. ಜಗದ್ಗುರು ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಅವರ ೩೨ನೇ ಸ್ಮರಣೋತ್ಸವದಲ್ಲಿ ಶಿವಯೋಗಿ ಸಿ. ಕಳಸದ, ಡಾ. ಬಸವಕುಮಾರ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಮೋಕ್ಷಪತಿ ಸ್ವಾಮೀಜಿ, ಡಾ.ಕೆ.ಬಿ. ಗುಡಸಿ, ಶ್ರೀ ಶಾಂತವೀರ ಸ್ವಾಮೀಜಿ, ಬಸವನಾಗೀದೇವ ಸ್ವಾಮೀಜಿ, ಶ್ರೀ ಸೇವಾಲಾಲ್ ಸ್ವಾಮೀಜಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಬಸವ ಮಹಾಂತ ಸ್ವಾಮೀಜಿ, ರಮೇಶ್ ಮತ್ತಿತರ ಗಣ್ಯರು ಇದ್ದರು.
ಮುರುಘಾಮಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಹೇಳಿಕೆ
ಹೊಳಲ್ಕೆರೆ ಒಂಟಿಕAಬದ ಮಠದಲ್ಲಿ ಶ್ರೀ ಮಲ್ಲಿಕಾರ್ಜುನ ಶ್ರೀಗಳ ಸ್ಮರಣೋತ್ಸವ
ಶ್ರೀ ಮುರುಘಾಮಠ
ಚಿತ್ರದುರ್ಗ:
ಚಿತ್ರದುರ್ಗದಲ್ಲಿ ಎಸ್‌ಜೆಎಂ ವಿದ್ಯಾಪೀಠ ಸ್ಥಾಪನೆ ಮೂಲಕ ಮಧ್ಯ ಕರ್ನಾಟಕದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಲಿಂ.ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಕಾರಣರಾಗಿದ್ದಾರೆ ಎಂದು ಶ್ರೀ ಮುರುಘಾಮಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಹೇಳಿದರು.
ಹೊಳಲ್ಕೆರೆ ಒಂಟಿಕAಬದ ಶ್ರೀ ಮುರುಘಾಮಠದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಮಲ್ಲಿಕಾರ್ಜುನ ಶ್ರೀಗಳ ೩೨ನೇ ಸ್ಮರಣೆ ÆÃತ್ಸವದಲ್ಲಿ ಮಾತನಾಡಿ, ೬೦ ವರ್ಷಗಳ ಹಿಂದೆ ಸ್ಥಾಪನೆಯಾದ ವಿದ್ಯಾಪೀಠವಿಂದು ಬೃಹದಾಕಾರವಾಗಿ ಬೆಳೆದಿದೆ. ಈ ಸಂಸ್ಥೆ ಯ ವಿವಿಧ ಶಾಲಾ, ಕಾಲೇಜುಗಳಲ್ಲಿ ಓದಿದವರು ಇಂದು ಉನ್ನತ ಸ್ಥಾನಗಳಲ್ಲಿದ್ದಾರೆ. ಸರ್ಕಾರ ಮಾಡುವಷ್ಟು ಕೆಲಸವನ್ನು ಶ್ರೀ ಮಠ ಹಾಗೂ ವಿದ್ಯಾಪೀಠದ ಮೂಲಕ ಮಲ್ಲಿಕಾರ್ಜುನ ಶ್ರೀಗಳು ಮಾಡಿದ್ದಾರೆ ಎಂದರು.
ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಜಯದೇವ ಶ್ರೀಗಳು ಅನ್ನದಾಸೋಹ, ವಸತಿ ನಿಲಯಗಳಿಗೆ ಪ್ರಾಮುಖ್ಯತೆ ನೀಡಿದ್ದರು. ಮಲ್ಲಿಕಾರ್ಜುನ ಶ್ರೀಗಳು ವಿದ್ಯಾಸಂಸ್ಥೆ ಸ್ಥಾಪಿಸಿ ಜ್ಞಾನ ದಾಸೋಹಕ್ಕೆ ಪ್ರಾಮುಖ್ಯತೆ ನೀಡಿದ್ದರು ಎಂದರು.
ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮೀಜಿ ಮಾತನಾಡಿ, ಮಲ್ಲಿಕಾರ್ಜುನ ಶ್ರೀಗಳು ಬಾಲ್ಯದಲ್ಲಿ ಅಥಣಿ ಶಿವಯೋಗಿಗಳ ಆರ್ಶೀವಾದ ಪಡೆದವರು. ಜಯದೇವ ಗುರುಗಳು ಮಲ್ಲಿಕಾರ್ಜುನ ಶ್ರೀಗಳನ್ನು ಗುರುತಿಸಿ ಕಾಶಿಯಲ್ಲಿ ಅವರಿಗೆ ವಿದ್ಯಾಭ್ಯಾಸ ಮಾಡಿಸಿದ್ದರು ಎಂದು ಸ್ಮರಿಸಿದರು.
ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ, ಮಲ್ಲಿಕಾರ್ಜನ ಶ್ರೀಗಳು ಮುಂದಾ ಲೋಚನೆ ಮಾಡಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಮಧ್ಯ ಕರ್ನಾಟಕದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗುವಂತೆ ಮಾಡಿದ್ದಾರೆ ಎಂದರು.
ರಾವಂದೂರಿನ ಶ್ರೀ ಮೋಕ್ಷಪತಿ ಸ್ವಾಮೀಜಿ, ಮಾಜಿ ಶಾಸಕ ಪಿ. ರಮೇಶ್, ಎಸ್‌ಜೆಎಂ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ. ಗುಡಸಿ, ರಾಜ್ಯ ಸ-Áಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಶಾಸಕ ಡಾ.ಎಂ. ಚಂದ್ರಪ್ಪ ಧ್ವಜಾರೋಹಣ ನೆರವೇರಿಸಿದರು.
ಗುರುಮಿಠಕಲ್ ಶ್ರೀ ಶಾಂತವೀರ ಸ್ವಾಮೀಜಿ, ಛಲವಾದಿ ಗುರುಪೀಠದ ಶ್ರೀ ಬಸವನಾಗೀದೇವ ಸ್ವಾಮೀಜಿ, ಬಂಜಾರ ಗುರು ಪೀ ಠದ ಶ್ರೀ ಸೇವಾಲಾಲ್ ಸ್ವಾಮೀಜಿ, ಶ್ರೀ ಬಸವ ಮಹಾಂತ ಸ್ವಾಮೀಜಿ, ಶರಣÉ ಶ್ರೀ ಸತ್ಯಕ್ಕ, ಅಕ್ಕ ಜಯಶ್ರೀ, ಮಾಜಿ ಶಾಸಕ ತಿಪ್ಪೇರುದ್ರಪ್ಪ, ಚಿತ್ರದುರ್ಗ ವೀರಶೈವ ಅರ್ಬನ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಟೇಲ್ ಶಿವಕುಮಾರ್, ಹರಗುರು ಚರಮೂರ್ತಿಗಳು ಇದ್ದರು.
ರಾಷ್ಟçಕವಿ ಜಿ.ಎಸ್.ಶಿವರುದ್ರಪ್ಪ ಜನ್ಮ ಶತಮಾನೋತ್ಸವದ ಅಂಗವಾಗಿ `ಸತ್ಯಶುದ್ಧ ಕಾಯಕ' ತ್ರೆÊ ಮಾಸಿಕ ಪುಸ್ತಕ ಬಿಡುಗಡೆ ಮಾಡಲಾಯಿತು. ಉಮೇಶ್‌ಪತ್ತಾರ್ ಪ್ರಾರ್ಥಿಸಿದರು. ಮುರುಗೇಶ್ ಸ್ವಾಗತಿಸಿದರು. ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ವಂದಿಸಿದರು.
ಸಾಮರಸ್ಯ ಮೂಡುತ್ತದೆ
ಬಸವಣ್ಣನವರ ವಚನಗಳ ಸಾರವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಇನ್ನೂ ಹೆಚ್ಚು ಸಾಮರಸ್ಯ ಮೂಡುತ್ತದೆ ಎಂದು ರಾಜ್ಯಸ-Áಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಹೇಳಿದರು.
ಮುರುಘಾ ಮಠ, ನಾನಾ ಸಮುದಾಯಗಳಿಗೆ ಮಠಗಳನ್ನು ಕಟ್ಟಿಕೊಟ್ಟು, ಎಲ್ಲ ಸಮುದಾಯಗಳ ಏಳಿಗೆಗೆ ಕಾರಣವಾಗಿದೆ. ಕರ್ನಾಟಕದ ಮಠಮಾನ್ಯಗಳು ಭೇದ, ಭಾವ ಮಾಡದೆ ಎಲ್ಲರಿಗೂ ಶಿಕ್ಷಣ ನೀಡುತ್ತಿವೆ. ರಾಜ್ಯದಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚಾಗುವ ನಿಟ್ಟಿನಲ್ಲಿ ನಾಡಿನ ಮಠಮಾನ್ಯಗಳ ಕೊಡುಗೆ ದೊಡ್ಡದಿದೆ ಎಂದರು.