ದೇಶದ ಪ್ರಗತಿಗೆ ಸಾಮಾಜಿಕ ನ್ಯಾಯ ನಿರ್ಣಾಯಕ

 ಚಿತ್ರದುರ್ಗದಲ್ಲಿ ಶುಕ್ರವಾರ ವಿಶ್ವ ಸಾಮಾಜಿಕ ನ್ಯಾಯದ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಜೆ. ಕರಿಯಪ್ಪ ಮಾಳಿಗೆ, ಎ. ಇಸ್ಮಾಯಿಲ್ ಜಬೀವುಲ್ಲಾ, ಬಿ.ಕೆ. ಬಸವರಾಜ್, ಜಿ.ಪಿ.ಭರತ್ ಇತರರು ಇದ್ದರು.
ಚಿತ್ರದುರ್ಗದಲ್ಲಿ ಶುಕ್ರವಾರ ವಿಶ್ವ ಸಾಮಾಜಿಕ ನ್ಯಾಯದ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಜೆ. ಕರಿಯಪ್ಪ ಮಾಳಿಗೆ, ಎ. ಇಸ್ಮಾಯಿಲ್ ಜಬೀವುಲ್ಲಾ, ಬಿ.ಕೆ. ಬಸವರಾಜ್, ಜಿ.ಪಿ.ಭರತ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಾಚಾರ್ಯ ಡಾ.ಜೆ. ಕರಿಯಪ್ಪ ಮಾಳಿಗೆ ಅನಿಸಿಕೆ
  • ಕಲಾ ಕಾಲೇಜಲ್ಲಿ ಸಾಮಾಜಿಕ ನ್ಯಾಯದ ದಿನ ಆಚರಣೆ
  • ಪ್ರಾಚಾರ್ಯ ಡಾ.ಜೆ. ಕರಿಯಪ್ಪ ಮಾಳಿಗೆ
ಚಿತ್ರದುರ್ಗ: ದೇಶದ ಪ್ರಗತಿಯಲ್ಲಿ ಸಾಮಾಜಿಕ ನ್ಯಾಯ ಅತ್ಯಂತ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ನಗರದ ಸರ್ಕಾರಿ ಕಲಾ ಕಾಲೇಜು ಪ್ರಾಚಾರ್ಯ ಡಾ.ಜೆ. ಕರಿಯಪ್ಪ ಮಾಳಿಗೆ ಹೇಳಿದರು.
ಮೇರಾ ಯುವ ಭಾರತ್ ಹಾಗೂ ಸರ್ಕಾರಿ ಕಲಾ ಕಾಲೇಜು ರಾಷ್ಟಿçÃಯ ಸೇವಾ ಯೋಜನೆ ಘಟಕ ೧ಮತ್ತು ೨ರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ವಿಶ್ವ ಸಾಮಾಜಿಕ ನ್ಯಾಯದ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಬೇರೂರಿರುವ ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸಮಾನತೆ ತರುವ ನಿಟ್ಟಿನಲ್ಲಿ ಜಾತಿ, ಮತ, ಧರ್ಮ, ಲಿಂಗ ತಾರತಮ್ಯಗಳನ್ನು ಹೋಗಲಾಡಿಸುವುದು ಅವಶ್ಯಕ ಎಂದರು.
ಅAಬೇಡ್ಕರ್ ಅವರು ಸಂವಿಧಾನದಲ್ಲಿ ಹೇಳಿರುವ ಸಾಮಾಜಿಕ ನ್ಯಾಯದ ಅಡಿ ಸಮಾಜವನ್ನು ಕಟ್ಟಬೇಕಿದೆ. ಇದರಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಮುಖ್ಯವಾಹಿನಿಯಿಂದ ದೂರ ಉಳಿದ ದಲಿತರು, ಹಿಂದುಳಿದ ವರ್ಗಗಳು, ಮಹಿಳೆಯರು ಮತ್ತು ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ಒದಗಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಯಾರು ಮೂಲ ಹಕ್ಕುಗಳಿಂದ ವಂಚಿತರಾಗಿದ್ದಾರೋ ಅಂತಹವರಿಗೆ ನ್ಯಾಯ ಒದಗಿಸುವುದೇ ನಿಜವಾದ ಸಾಮಾಜಿಕ ನ್ಯಾಯ. ಸಂವಿಧಾನದ ಚೌಕಟ್ಟಿನಲ್ಲಿ ಪ್ರತಿಯೊಬ್ಬರಿಗೂ ನ್ಯಾಯ ಸಿಕ್ಕಾಗ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಲು ಸಾಧ್ಯ ಎಂದರು.
ವಕೀಲ ಎ. ಇಸ್ಮಾಯಿಲ್ ಜಬೀವುಲ್ಲಾ ಉಪನ್ಯಾಸ ನೀಡಿದರು. ಕಾಲೇಜಿನ ಕಾರ್ಯಕ್ರಮಾಽಕಾರಿ ಬಿ.ಕೆ. ಬಸವರಾಜ, ಮೇರಾ ಯುವ ಭಾರತ್ ಸಹಾಯಕ ಜಿ.ಪಿ. ಭರತ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net