ಒತ್ತಡ ಮುಕ್ತ ಜೀವನಕ್ಕೆ ಬೇಕು ಕ್ರೀಡಾಕೂಟ

ಚಿತ್ರದರ‍್ಗದಲ್ಲಿ ಗುರುವಾರ ಸರ‍್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಡಿಸಿ ಟಿ.ವೆಂಕಟೇಶ್ ಉದ್ಘಾಟಿಸಿದರು. ರಾಜ್ಯ ಸಫಾಯಿ ಕರ‍್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಕುಡಾ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಸಿಇಒ ಡಾ.ಎಸ್.ಆಕಾಶ್ ಇತರರಿದ್ದರು.
ಚಿತ್ರದರ‍್ಗದಲ್ಲಿ ಗುರುವಾರ ಸರ‍್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಡಿಸಿ ಟಿ.ವೆಂಕಟೇಶ್ ಉದ್ಘಾಟಿಸಿದರು. ರಾಜ್ಯ ಸಫಾಯಿ ಕರ‍್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಕುಡಾ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಸಿಇಒ ಡಾ.ಎಸ್.ಆಕಾಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಫಾಯಿ ಕರ‍್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು
  • ಸರ‍್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ
  • ಆರೋಗ್ಯ
ಚಿತ್ರದುರ್ಗ: ರ‍್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನೌಕರರ ಪಾತ್ರ ಹಿರಿದು ಎಂದು ರಾಜ್ಯ ಸಫಾಯಿ ರ‍್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಹೇಳಿದರು.
ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ರ‍್ಕಾರಿ ನೌಕರರ ಜಿಲ್ಲಾ ಮಟ್ಟದ ೨ ದಿನಗಳ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಉದ್ಘಾಟಿಸಿ ಮಾತನಾಡಿದರು.
ನೌಕರರ ಮನೋಲ್ಲಾಸಕ್ಕೆ ಕ್ರೀಡಾಕೂಟ-ಸಾಂಸ್ಕೃತಿಕ ಕರ‍್ಯಕ್ರಮಗಳ ಅಗತ್ಯವಿದೆ. ಕೆಲಸದ ಒತ್ತಡದಿಂದ ಹೊರಬರಲು ಇವು ಸಹಕಾರಿ ಎಂದು ತಿಳಿಸಿದರು.
೩೦-೪೦ ರ‍್ಷಕ್ಕೆ ರಕ್ತದೊತ್ತಡ, ಮಧುಮೇಹದಂತಹ ಆರೋಗ್ಯ ಸಮಸ್ಯೆ ಎದುರಿಸುವಂತೆ ಆಗಿದೆ. ಈಗ ಆರೋಗ್ಯ ರ‍್ಲಕ್ಷಿಸಿದರೆ, ನಿವೃತ್ತಿ ನಂತರದ ಸೌಲಭ್ಯ ಅನುಭವಿಸಲು ಶಕ್ತಿ ಇರದು. ಸದೃಢ ಆರೋಗ್ಯಕ್ಕೆ ದೈಹಿಕ ಚಟುವಟಿಕೆಗಳಿಗೂ ಆದ್ಯತೆ ನೀಡಲು ಸಲಹೆ ನೀಡಿದರು.
ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ,ಪಾರರ‍್ಶಕ ಆಡಳಿತದ ಮೂಲ ಕ ರ‍್ಕಾರಕ್ಕೆ ಉತ್ತಮ ಹೆಸರು ತರಬೇಕು. ರಾಜ್ಯ ಸರ‍್ಕಾರ ೭ನೇ ವೇತನ ಆಯೋಗದ ಶಿಫಾರಸು ಜಾರಿ ಮೂಲಕ ನೌಕರರ ರ‍್ಥಿಕ ಭದ್ರತೆಗೆ ಒತ್ತು ನೀಡಿದೆ ಎಂದರು.
ಜಿಪಂ ಸಿಇಒ ಡಾ.ಎಸ್.ಆಕಾಶ್ ಮಾತನಾಡಿ, ಜಿಲ್ಲೆಯ ೧೫ ಸಾವಿರ ರ‍್ಕಾರಿ ನೌಕರರಲ್ಲಿ ೨ ಸಾವಿರಕ್ಕೂ ಹೆಚ್ಚು ಮಂದಿ ಕ್ರೀಡಾ ಕೂಟದಲ್ಲಿ ಭಾಗವಹಿಸಿರುವುದು ಶ್ಲಾಘನೀಯ. ಕೆಲಸದ ನಡುವೆ ನಡಿಗೆ, ಯೋಗ, ಧ್ಯಾನ ರೂಢಿಸಿಕೊಳ್ಳಬೇಕಿದೆ. ನೌಕರರ ಸಂ ಘದ ಸಮುದಾಯ ಭವನಕ್ಕೆ ಜಮೀನು ಮಂಜೂರಾಗಲಿದೆ ಎಂದು ತಿಳಿಸಿದರು.
ಕುಡಾ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ, ಸರ‍್ವಜನಿಕರಿಗೆ ಉತ್ತಮ ಸೇವೆ ನೀಡುವ ಮೂಲಕ ರ‍್ಕಾರದ ಗೌರವ ಹೆಚ್ಚಿಸುವ ಕೆಲಸ ತಮ್ಮಿಂದ ಆಗಬೇಕು ಎಂದರು.
ಕ್ರೀಡಾಕೂಟ ಉದ್ಘಾಟಿಸಿದ ಜಿಲ್ಲಾಽಕಾರಿ ಟಿ.ವೆಂಕಟೇಶ್, ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಎಡಿಸಿ ಬಿ.ಟಿ.ಕುಮಾರಸ್ವಾಮಿ, ಜಿಪಂ ಡಿಎಸ್ ಡಾ.ರಂಗಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ರ‍್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದಜ್ಜಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net