ಚಳ್ಳಕೆರೆಯಲ್ಲಿ ಕ್ರೀಡಾಂಗಣ ಕಾಮಗಾರಿಗೆ ಚಾಲನೆ Stadium

ಚಳ್ಳಕೆರೆಯ ಪಾವಗಡ ರಸ್ತೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಗುರುವಾರ ಶಾಸಕ ಟಿ. ರಘುಮೂರ್ತಿ ಭೂಮಿಪೂಜೆ ನೆರವೇರಿಸಿದರು. ಸಿ.ಟಿ. ಶ್ರೀನಿವಾಸ್, ಗದ್ದಿಗೆ ತಿಪ್ಪೇಸ್ವಾಮಿ, ಕೆ. ವೀರಭದ್ರಯ್ಯ, ಜಿ.ಟಿ. ಶಶಿಧರ್ ಇದ್ದರು. Stadium
ಚಳ್ಳಕೆರೆಯ ಪಾವಗಡ ರಸ್ತೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಗುರುವಾರ ಶಾಸಕ ಟಿ. ರಘುಮೂರ್ತಿ ಭೂಮಿಪೂಜೆ ನೆರವೇರಿಸಿದರು. ಸಿ.ಟಿ. ಶ್ರೀನಿವಾಸ್, ಗದ್ದಿಗೆ ತಿಪ್ಪೇಸ್ವಾಮಿ, ಕೆ. ವೀರಭದ್ರಯ್ಯ, ಜಿ.ಟಿ. ಶಶಿಧರ್ ಇದ್ದರು. Stadium
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಟಿ. ರಘುಮೂರ್ತಿ ಹೇಳಿಕೆ
  • 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಚಳ್ಳಕೆರೆ: ನಗರದ ಪಾವಗಡ ರಸ್ತೆಯ ಉಪ್ಪಾರಹಟ್ಟಿ ಗೇಟ್ ಬಳಿ ಸುಮಾರು ಹತ್ತು ಎಕರೆ ವ್ಯಾಪ್ತಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. Stadium
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಗುರುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಚಳ್ಳಕೆರೆ ನಗರ ದಿನೇದಿನೆ ಬೆಳೆಯುತ್ತಿದೆ. ಈಗಾಗಲೇ ಪಾವಗಡ ರಸ್ತೆಯಲ್ಲಿ ಮುರಾರ್ಜಿ ವಸತಿ ಶಾಲೆ, ಆದರ್ಶ ವಿದ್ಯಾಲಯ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ, ಸರ್ಕಾರಿ ಕೈಗಾರಿಕಾ ತರಬೇತಿ ಶಾಲೆ, ದೇವರಾಜ ಅರಸು ವಸತಿ ಸಂಕೀರ್ಣ ಸ್ಥಾಪಿಸಲಾಗಿದೆ. ಇದರಿಂದ ಸುಮಾರು 5 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಇಲ್ಲಿ ನಿರ್ಮಾಣವಾಗಲಿರುವ ಕ್ರೀಡಾಂಗಣ ವಿದ್ಯಾರ್ಥಿಗಳಿಗೂ, ಕ್ರೀಡಾಪೊಟುಗಳಿಗೂ ಅನುಕೂಲವಾಗಲಿದೆ. ದೊಡ್ಡಮಟ್ಟದ ಕ್ರೀಡೆಗಳ ಆಯೋಜನೆಗೆ 16 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಿಸುವ ಗುರಿ ಇದೆ. ಪ್ರಸ್ತುತ 10ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತ, ತಹಸೀಲ್ದಾರ್ ರೇಹಾನ್ ಪಾಷ, ಪೌರಾಯುಕ್ತೆ ಡಾ. ನಾಗವೇಣಿ, ಕೆಪಿಸಿಸಿ ಎಸ್ಟಿ ವಿಭಾಗ ಅಧ್ಯಕ್ಷ ಸಿ.ಟಿ. ಶ್ರೀನಿವಾಸ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ವೀರಭದ್ರಯ್ಯ, ಜಿ.ಟಿ. ಶಶಿಧರ್, ಬಿ.ಟಿ. ರಮೇಶ್‌ಗೌಡ, ಹಳೇಟೌನ್ ಭದ್ರಿ, ಸುರೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net