೧೨ರಂದು ಮೈಸೂರಲ್ಲಿ ರಾಜ್ಯಮಟ್ಟದ ಎನ್‌ಪಿಇಪಿ ಸ್ಪರ್ಧೆ

ಚಿತ್ರದುರ್ಗ ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ,ನೋಡಲ್ ಅಽಕಾರಿ ಎಸ್. ಬಸವರಾಜು
ಚಿತ್ರದುರ್ಗ ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ,ನೋಡಲ್ ಅಽಕಾರಿ ಎಸ್. ಬಸವರಾಜು
Published on

ಪ್ರಮುಖ ಮುಖ್ಯಾಂಶಗಳು

  • ಎನ್‌ಪಿಇಪಿ
  • ಮೈಸೂರು ಡಯಟ್‌
  • ಉತ್ತಮ ಪ್ರದರ್ಶನ
ಚಿತ್ರದುರ್ಗ: ರಾಷ್ಟಿçÃಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿ ೨೦೨೫-೨೬ನೇ ಸಾಲಿನ ರಾಜ್ಯಮಟ್ಟದ ಪಾತ್ರಾಭಿನಯ ಹಾಗೂ ಜಾನಪದ ನÊತ್ಯ ಸ್ಪರ್ಧೆಗಳು ಮೈಸೂರು ಡಯಟ್‌ನಿಂದ ಅಲ್ಲಿಯ ಕಳಸ್ತವಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯ ಮಾನವ ಸಂಪನ್ಮೂಲ ತರಬೇತಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ ಎಂದು ಚಿತ್ರದುರ್ಗ ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ತಿಳಿಸಿದರು.
ನಗರದ ಡಯಟ್‌ನಲ್ಲಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಮಾಹಿತಿ ಸಭೆಯಲ್ಲಿ ಮಾತನಾ ಡಿ,ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಬೇಕು ಎಂದರು.

ಎನ್‌ಪಿಇಪಿ ಜಿಲ್ಲಾ ನೋಡಲ್ ಅಽಕಾರಿ ಎಸ್. ಬಸವರಾಜು ಮಾತನಾಡಿ, ೨೦೨೪-೨೫ನೇ ಸಾಲಿನಲ್ಲಿ ಚಿತ್ರದುರ್ಗ ಡಯಟ್‌ ನಿಂದ ನಗರದ ಮುರುಘಾ ಮಠದಲ್ಲಿ ರಾಜ್ಯಮಟ್ಟದ ಸ್ಪರ್ಧೆ ನಡೆಸಲಾಗಿತ್ತು.
ಪ್ರಸಕ್ತ ಸಾಲಿನ ರಾಜ್ಯಮಟ್ಟದ ಸ್ಪರ್ಧೆಗೆ ಜಿಲ್ಲಾಮಟ್ಟದಲ್ಲಿ ಪಾತ್ರಾಭಿನಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಹೊಸದುರ್ಗ ಸರ್ಕಾರಿ ಪ.ಪೂ. ಕಾಲೇಜು(ಪ್ರೌಢಶಾಲಾ ವಿಭಾಗ)೫ ವಿದ್ಯಾರ್ಥಿಗಳ ತಂಡ, ಜಾನಪದ ನÊತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಚಳ್ಳಕೆರೆ ತಾಲೂಕು ತಿಮ್ಮಪ್ಪಯ್ಯನಹಳ್ಳಿ ಸರ್ಕಾರಿ ಪ್ರೌಢಶಾಲೆ ೬ ವಿದ್ಯಾರ್ಥಿಗಳ ತಂಡ ಪಾಲ್ಗೊಳ್ಳಲಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net