

ಚಿತ್ರದುರ್ಗ: ರಾಷ್ಟಿçÃಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿ ೨೦೨೬-೨೭ನೇ ಸಾಲಿನ ರಾಜ್ಯಮಟ್ಟದ ಪಾತ್ರಾಭಿನಯ ಹಾಗೂ ಜಾನಪದ ನÊತ್ಯ ಸ್ಪರ್ಧೆಗಳನ್ನು ಮಂಗಳೂರು ಡಯಟ್‌ನಿಂದ ನ.೨೮ರಂದು ಅಲ್ಲಿಯ ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಚಿತ್ರದುರ್ಗ ಡಯಟ್ ಪ್ರಾಚರ‍್ಯ ಎಸ್. ನಾಗಭೂಷಣ್ ತಿಳಿಸಿದರು.
ನಗರದ ಡಯಟ್‌ನಲ್ಲಿ ಈ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಮಾಹಿತಿ ಸಭೆಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜೀವನ ಕೌಶಲಗಳನ್ನು ಬೆಳೆಸಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಸ್ಪರ್ಧೆಗಳು ಸಹಕಾರಿಯಾಗಲಿವೆ. ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಬೇಕೆಂದು ಆಶಿಸಿದರು.
ಎನ್‌ಪಿಇಪಿ ಜಿಲ್ಲಾ ನೋಡಲ್ ಅಽಕಾರಿ ಎಸ್. ಬಸವರಾಜು ಮಾತನಾಡಿ, ಪಠ್ಯ ಕಲಿಕೆಯೊಂದಿಗೆ ಸಹಪಠ್ಯ ಚಟುವಟಿಕೆಗಳ ಮೂಲಕ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಸಮಗ್ರ ವ್ಯಕ್ತಿತ್ವ ವಿಕಸನ, ಜೀವನ ಕೌಶಲಗಳನ್ನು ರೂಢಿಸಿಕೊಳ್ಳಲು ಜಾಗÊತಿ ಮೂಡಿಸುವ ಉದ್ದೇಶದಿಂದ ಶಾಲಾ ಹಂತದಿAದ ರಾಷ್ಟಮಟ್ಟದವರೆಗೆ ಎನ್‌ಪಿಇಪಿ ಥೀಮ್ ಆಧಾರಿತ ಸಹಪಠ್ಯ ಸ್ಪರ್ಧಾ ಚಟುವಟಿಕೆ ಪಾತ್ರಾಭಿನಯ ಮತ್ತು ಜಾನಪದ ನÊತ್ಯ ಸ್ಪರ್ಧೆ ಆಯೋಜಿಸಲಾಗಿದೆ.
ಜಿಲ್ಲಾಮಟ್ಟದಲ್ಲಿ ಪಾತ್ರಾಭಿನಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಮೊಳಕಾಲ್ಮೂರು ತಾಲೂಕಿನ ಜೆ.ಬಿ ಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಐವರು ವಿದ್ಯಾರ್ಥಿಗಳ ತಂಡ, ಜಾನಪದ ನೃತ್ಯಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಇದೇ ಶಾಲೆಯ ೬ ವಿದ್ಯಾರ್ಥಿಗಳ ತಂಡ ಸ್ಪರ್ಧೆಗಳಲ್ಲಿ ಭಾಗವಹಿಸಲಿದೆ ಎಂದರು.