ಮೈಸೂರಿನ ರಂಗಕರ್ಮಿ ಪ್ರೊ. ರಾಮೇಶ್ವರಿವರ್ಮಾ ಸಮಾವೇಶ ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ಎಐಎಂಎಸ್‌ಎಸ್ ರಾಜ್ಯ ಕಾರ್ಯದರ್ಶಿ ಕೆ. ಉಮಾ, ಬೆಂಗಳೂರಿನ ನ್ಯಾಯವಾದಿ ಹೇಮಲತಾ ಮಹಿಷಿ, ವೈದ್ಯರಾದ ಡಾ. ಶ್ರೀದೇವಿಕುಮಾರ್, ಡಾ. ಸುಧಾ ಕಾಮತ್, ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಸಬಿಹಾ ಭೂಮಿಗೌಡ, ಚಲನಚಿತ್ರ ಗೀತೆ ರಚನೆಕಾರ ಕವಿರಾಜ್ ಭಾಗವಹಿಸುವರು. ಎಐಎಂಎಸ್‌ಎಸ್ ರಾಜ್ಯ ಸಮಿತಿ ಅಧ್ಯಕ್ಷೆ ಎಂ.ಎನ್. ಮಂಜುಳಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.