ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿ ಧನ ಧಾನ್ಯ ಕÊಷಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಡಾ.ಎಂ.ಎನ್. ಅಜಯ್ ನಾಗ್‌ಭೂಷಣ್,ಡಿಸಿ ಟಿ. ವೆಂಕಟೇಶ್, ಸಿಇಒ ಡಾ.ಎಸ್. ಆಕಾಶ್, ಎಡಿಸಿ ಬಿ.ಟಿ. ಕುಮಾರಸ್ವಾಮಿ ಇತರರು ಇದ್ದರು.
ಚಿತ್ರದುರ್ಗ: ಜಿಲ್ಲೆಯಲ್ಲಿ ಕÊಷಿ ಉತ್ಪನ್ನ ಹೆಚ್ಚಳಕ್ಕೆ ಕ್ರಮವಹಿಸಬೇಕು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ, ಪ್ರಧಾನ ಮಂತ್ರಿ ಧನಧಾನ್ಯ ಕÊಷಿ ಯೋಜನೆ ಕೇಂದ್ರ ನೋಡಲ್ ಅಽಕಾರಿ ಸೂಚಿಸಿದರು. ನಗರದ ಡಿಸಿ ಕಚೇರಿಯಲ್ಲಿ ಮಂಗಳವಾರ ಪಿಎಂಡಿಡಿಕೆವೈ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯ ಮುಖ್ಯ ಬೆಳೆಗಳಾದ ಶೇಂಗಾ, ರಾಗಿ, ತೊಗರಿ, ಸಿರಿಧಾನ್ಯಗಳ ಉತ್ಪಾದನೆ ಹಾಗೂ ಇಳುವರಿ ಪ್ರಮಾಣ ಹೆಚ್ಚಿಸಲು ಗೊಬ್ಬರ ಗಳ ಬಳಕೆ, ಮಣ್ಣಿನ -Àಲವತ್ತತೆ ನಿರ್ವಹಣೆ, ಉತ್ತಮ ತಳಿಗಳ ಅಳವಡಿಕೆ, ವ್ಯವಸ್ಥಿತವಾಗಿ ಸ್ಪಿಂಕ್ಲರ್, ಡ್ರಿಪ್ ಅಳವಡಿಕೆ ಮಾಡಬೇಕು ಎಂದರು.
ರೈತರ ಆದಾಯ ಹೆಚ್ಚಳ ಹಾಗೂ ಕÊಷಿ ವಲಯದ ಬೆಳವಣಿಗೆ ಉತ್ತೇಜನಕ್ಕೆ ಕÊಷಿ ಉತ್ಪಾದಕ ಸಂಸ್ಥೆಗಳು, ಸ್ವ ಸಹಾಯ ಸಂ ಘಗಳ ಮೂಲಕ ಕÊಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಪ್ಯಾಕೇಜಿಂಗ್, ಬ್ರ‍್ಯಾಂಡಿAಗ್ ಪ್ರಕ್ರಿಯೆ ಮೂಲಕ ಸೂಕ್ತ ಮಾರುಕಟ್ಟೆ ಸೌಲಭ್ಯ ಕಲ್ಪಿಸಬೇಕು ಎಂದರು.
ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಗೆ ಸೂಕ್ಷ÷್ಮ ನೀರಾವರಿ ಸೌಲಭ್ಯ ದೊರೆಯಲಿದೆ. ಮುಂದಿನ ದಿನಗಳಲ್ಲಿ ಈ ಯೋಜನೆ ಅ ನುಷ್ಠಾನಗೊಳ್ಳಲಿದೆ. ಇದಕ್ಕೆ ಸೂಕ್ತ ಕÊಷಿ ಹಾಗೂ ತೋಟಗಾರಿಕೆ ಬೆಳೆ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು.`ಭದ್ರಾ'ಯಶಸ್ವಿ ಅನುಷ್ಠಾನ ನಿಟ್ಟಿನಲ್ಲಿ ಸಣ್ಣ ನೀರಾವರಿ, ಕÊಷಿ ಹಾಗೂ ತೋಟಗಾರಿಕೆ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸ ಬೇಕು ಎಂದು ತಿಳಿಸಿದರು.
ರಾಗಿ, ಸಿರಿಧಾನ್ಯಗಳಿಗೂ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಈ ಕುರಿತು ರೈತರಿಗೆ ಜಾಗೃತಿ ಮೂಡಿಸಿದರೆ ಬೆಳೆ ಇಳುವರಿ ಹಾಗೂ ಆದಾಯವೂ ಹೆಚ್ಚಾಗಲಿದೆ. ಉತ್ತಮ ಬೇಸಾಯ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ಕೃಷಿಕರನ್ನು ಪ್ರೇರೇಪಿಸುವಂತೆ ಅಽಕಾರಿಗಳಿಗೆ ತಾಕೀತು ಮಾಡಿದರು.
ಕÊಷಿ ಕೂಲಿಕಾರ್ಮಿಕರ ಸಮಸ್ಯೆ ನೀಗಿಸುವುದಕ್ಕಾಗಿ ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡಬೇಕು. ಜಿಲ್ಲೆಯಲ್ಲಿ ೨೦ ಹೊಸ ಪ್ರಾಥ ಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವಂತೆ ಅಽಕಾರಿಗಳಿಗೆ ನಿರ್ದೇಶಿಸಿದರು. ಡಿಸಿ ಟಿ.ವೆಂಕ ಟೇಶ್, ಜಿಪಂ ಸಿಇಒ ಡಾ.ಎಸ್. ಆಕಾಶ್, ಎಡಿಸಿ ಬಿ.ಟಿ. ಕುಮಾರಸ್ವಾಮಿ, ಜಂಟಿ ಕÊಷಿ ನಿರ್ದೇಶಕ ಬಿ. ಮಂಜುನಾಥ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ. ಆನಂದ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ರಾಘವೇಂದ್ರ ಇತರರು ಇದ್ದರು.