ಜಿಲ್ಲೆಯಲ್ಲಿ ಮಿಷನ್ ಏಡ್ಸ್ ಸುರಕ್ಷಾ ಕಾರ್ಯಕ್ರಮ ಚುರುಕಾಗಲಿ

ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರದಲ್ಲಿ ಶುಕ್ರವಾರ ಚಿತ್ರದುರ್ಗ ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳ ಪ್ರಗತಿ ಪರಿ ಶೀಲನಾ ಸಭೆ
ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರದಲ್ಲಿ ಶುಕ್ರವಾರ ಚಿತ್ರದುರ್ಗ ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳ ಪ್ರಗತಿ ಪರಿ ಶೀಲನಾ ಸಭೆ
Published on

ಪ್ರಮುಖ ಮುಖ್ಯಾಂಶಗಳು

  • ಚಿತ್ರದುರ್ಗ ಏಡ್ಸ್ ನಿಯಂತ್ರಣ ಕಾರ್ಯಕ್ರಮ
  • ಪ್ರಗತಿ ಪರಿ ಶೀಲನಾ ಸಭೆ
  • ಎಚ್‌ಐವಿ ಮುಕ್ತ ಸಮಾಜ
ಚಿತ್ರದುರ್ಗ: ಎಚ್‌ಐವಿ/ಏಡ್ಸ್ ಸಂಪೂರ್ಣ ನಿರ್ಮೂಲನೆ ಉದ್ದೇಶದಿಂದ ಹಮ್ಮಿಕೊಂಡಿರುವ ಸುರಕ್ಷಾ ಕಾರ್ಯಕ್ರಮಗಳನ್ನು ಅತ್ಯಂ ತ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಕೆಎಸ್‌ಎಪಿಎಸ್ ಜಂಟಿ ನಿರ್ದೇಶಕಿ, ಜಿಲ್ಲಾ ನೋಡಲ್ ಅಽಕಾರಿ ಡಾ. ಗೀ ತಾ ವಿ.ಮಕ್ಕಣ್ಣವರ್ ಅಽಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರದಲ್ಲಿ ಶುಕ್ರವಾರ ಚಿತ್ರದುರ್ಗ ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳ ಪ್ರಗತಿ ಪರಿ ಶೀಲನಾ ಸಭೆಯಲ್ಲಿ ಮಾತನಾಡಿ, ೨೦೩೦ರೊಳಗೆ ಎಚ್‌ಐವಿ ಮುಕ್ತ ಸಮಾಜಕ್ಕೆ ಶ್ರಮಿಸಬೇಕಿದೆ. ಎಚ್‌ಐವಿ ಸೋಂಕಿನ ನಿಯಂ ತ್ರಣ, ಶೀಘ್ರ ಪತ್ತೆ, ಸೂಕ್ತ ಚಿಕಿತ್ಸೆ ಮತ್ತು ಚಿಕಿತ್ಸೆಯಿಂದ ದೂರ ಉಳಿದಿರುವವರನ್ನು ಪತ್ತೆ ಹಚ್ಚಿ ಪುನಃ ಚಿಕಿತ್ಸೆಗೆ ಒಳಪಡಿಸುವ ನಿ ಟ್ಟಿನಲ್ಲಿ ಆರೋಗ್ಯ ಇಲಾಖೆ ಚುರುಕಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯದಲ್ಲಿ ಈ ಸೋಂಕಿನ ಬಗ್ಗೆ ತಿಳಿವಳಿಕೆ ಕಡಿಮೆಯಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು. ಈ ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಅಽಕ ಸಂಖ್ಯೆಯಲ್ಲಿ ಹಮ್ಮಿಕೊಳ್ಳಬೇಕು. ದೇಶಾದ್ಯಂತ ಎಚ್‌ಐವಿ ನಿಯಂತ್ರಣಕ್ಕಾಗಿ ಹಮ್ಮಿಕೊಂಡಿರುವ`೯೫-೯೫-೯೯'ರ ವಿಶೇಷ ಗುರಿ ತಲುಪಲು ಜಿಲ್ಲೆಯಲ್ಲಿ ಮಿಷನ್ ಏಡ್ಸ್ ಸುರಕ್ಷಾ ಕಾರ್ಯಕ್ರಮ ಚುರುಕಾಗಬೇಕು.
ಇದರ ಅನ್ವಯ ಶೇ.೯೫ ಜನರಿಗೆ ತಮ್ಮ ಎಚ್‌ಐವಿ ಸ್ಥಿತಿಯ ಅರಿವಿರಬೇಕು. ಪತ್ತೆಯಾದ ಸೋಂಕಿತರಲ್ಲಿ ಶೇ.೯೫ ಮಂದಿ ಕಡ್ಡಾ ಯವಾಗಿ ಎಆರ್‌ಟಿ ಚಿಕಿತ್ಸೆಗೆ ಒಳಪಡಬೇಕು ಮತ್ತು ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಶೇ.೯೯ ಮಂದಿಯಲ್ಲಿ ವೈರಸ್ ಪ್ರಮಾಣ ನಿಯಂತ್ರಣಕ್ಕೆ ಬರಬೇಕು. ಇದರ ಮೇಲ್ವಿಚಾರಣೆಗೆ ಪ್ರತಿ ತಿಂಗಳು ತಾವು ಜಿಲ್ಲೆಗೆ ಭೇಟಿ ನೀಡುವುದಾಗಿ ಡಾ.ಗೀತಾ ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಽಕಾರಿ ಡಾ.ಸಿ.ಒ. ಸುಧಾ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿ ತಿಂಗಳು ಸರಾಸರಿ ೨೫ ರವರೆಗೆ ಹೊಸ ಸೋಂಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಅಪಾಯದ ಅಂಚಿನಲ್ಲಿರುವ ಸಮುದಾಯಗಳನ್ನು ಗುರುತಿಸಿ ವಿಶೇಷ ಅರಿವು ಕಾರ್ಯ ಕ್ರಮಗಳನ್ನು ನಡೆಸಲಾಗುತ್ತಿದೆ. ಇವುಗಳನ್ನು ಇನ್ನೂ ಪರಿಣಾಮಕಾರಿಯಾಗಿ ಹಮ್ಮಿಕೊಂಡು ಜಿಲ್ಲೆಯಲ್ಲಿ ಎಚ್‌ಐವಿ ಏಡ್ಸ್ ನಿಯಂತ್ರಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net