ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿ

ಮಾಜಿ ಸಚಿವ ರೇಣುಕಾಚಾರ್ಯ ಆರೋಪ
ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿ
M.P.Renukacharya
Published on: 

ಚಿತ್ರದುರ್ಗ: ಪ್ರಸ್ತುತ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದ್ದು, ಮುಂಬರುವ ಚುನಾವಣೆಯಲ್ಲಿ ಭಾರಿ ಸೋಲು ಕಾಣಲಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಭವಿಷ್ಯ ನುಡಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಽಕಾರಕ್ಕೆ ಬಂದ ಬಳಿಕ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಸ್ವಾತಂತ್ರ‍್ಯ ನಂತರದಲ್ಲಿ ಇಂಥ ಕೆಟ್ಟ ಸರ್ಕಾರವನ್ನು ರಾಜ್ಯದ ಜನ ನೋಡೇ ಇಲ್ಲ. ಕಾಂಗ್ರೆಸ್ಸಿಗರು ಶೇ.೪೦ ಗುತ್ತಿಗೆ ಕಮಿಷನ್ ಸರ್ಕಾರವೆಂದು ಬಿಜೆಪಿ ವಿರುದ್ಧ ಆರೋಪಿಸಿದ್ದರು. ಆದರೆ, ಈಗ ಶೇ.೬೦ಕ್ಕಿಂತ ಹೆಚ್ಚಿನ ಕಮಿಷನ್ ಅನ್ನು ಗುತ್ತಿಗೆದಾರರು ಕೊಡಬೇಕಾಗಿದೆ. ಗುತ್ತಿಗೆದಾರರಿಗೆ ಕಳೆದ ಮೂರೂವರೆ ವರ್ಷಗಳಿಂದ ಬಿಲ್ ಬಾಕಿ ಇದೆ ಎಂದು ವಾಗ್ದಾಳಿ ನಡೆಸಿದರು.

ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಭೀಕರ ಬರಗಾಲವಿದ್ದರೂ ರೈತರಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಕೇಂದ್ರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಽ ಯೋಜನೆಯಡಿ ರೈತರಿಗೆ ೬ ಸಾವಿರ ರೂ. ಕೊಡಲಾಗುತ್ತಿದೆ. ಆದರೆ, ರಾಜ್ಯ ಸರ್ಕಾರದಿಂದ ಇದಕ್ಕೆ ಭರಿಸುತ್ತಿದ್ದ ಹೆಚ್ಚುವರಿ ಹಣ ಸಹ ಸ್ಥಗಿತಗೊಳಿಸಲಾಗಿದೆ. ಮಾಸಾಶನ, ಪಿಂಚಣಿ ಮೊತ್ತ ಫಲಾನುಭವಿಗಳು ಸರಿಯಾಗಿ ಜಮಾ ಆಗುತ್ತಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.

ಪಕ್ಷದ ಪ್ರಮುಖರಾದ ವೆಂಕಟೇಶ್‌ಯಾದವ್, ಮಲ್ಲಿಕಾರ್ಜನ್, ಸುರೇಶ್, ನಾಗರಾಜ್‌ಬೇದ್ರೆ ಇದ್ದರು.

-----

ಗ್ಯಾರಂಟಿ ಹೆಸರಲ್ಲಿ ವಂಚನೆ..

ಇAಧನ ಸಹಿತ ವಿವಿಧ ತೆರಿಗೆಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಸಾರಿಗೆ, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳ ಗಗನಕ್ಕೇರಿರುವುದರಿಂದಾಗಿ ಮಹಿಳೆಯರು, ರೈತರು ಹಾಗೂ ಬಡವರು ತೀವ್ರ ಸಂಕಷ್ಟದಲ್ಲಿದ್ದಾರೆ. ಗ್ಯಾರಂಟಿಗಳ ಹೆಸರಲ್ಲಿ ಜನರನ್ನು ವಂಚಿಸಲಾಗುತ್ತಿದ್ದು, ಜನರು ಈ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶೇ.೫೦ ಕಾಂಗ್ರೆಸ್ ಶಾಸಕರು, ಸಚಿವರಿಗೆ ಸೋಲಿನ ಭೀತಿ ಕಾಡಿದೆ ಎಂದು ರೇಣುಕಾಚಾರ್ಯ ತಿಳಿಸಿದರು.