ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಬಹುಮಾನ

ತನುಜಾ
ತನುಜಾ
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ
  • ವಾರ್ತಾ ಇಲಾಖೆ
  • ಮಹಾತ್ಮಾ ಗಾಂಽ ಜಯಂತಿ
ಚಿತ್ರದುರ್ಗ: ವಾರ್ತಾ ಇಲಾಖೆಯಿಂದ ಮಹಾತ್ಮಾ ಗಾಂಽ ಜಯಂತಿ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಚಿತ್ರದುರ್ಗ ತಾಲೂಕು ಚವಲಿಹಳ್ಳಿ ಗೊಲ್ಲರಹಟ್ಟಿಯ ಸರ್ಕಾರಿ ಪ್ರೌಢಶಾಲೆ ೧೦ನೇ ತರಗತಿ ವಿದ್ಯಾರ್ಥಿನಿ ತನುಜಾ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಜಿಲ್ಲಾಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಮತ್ತು ಸ್ನಾತಕೊತ್ತರ ಪದವಿ ವಿಭಾಗ ಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ತನುಜಾ, ಸ್ವಚ್ಛತೆಯ ಪಾಠ-ಗಾಂಽÃಜಿಯವರ ಸಂದೇಶ ವಿಷಯ ಕುರಿತು ಬರೆದ ಪ್ರಬಂಧಕ್ಕೆ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದರು.
ವಿಭಾಗವಾರು ಪ್ರಥಮ ಬಹುಮಾನ ಪಡೆದಿದ್ದ ಪ್ರಬಂಧಗಳನ್ನು ರಾಜ್ಯಮಟ್ಟದ ಸ್ಪರ್ಧೆಗೆ ಕಳುಹಿಸಿಕೊಡಲಾಗಿತ್ತು. ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗದ ತೃತೀಯ ಬಹುಮಾನವು ೧೧೦೦೦ ರೂ.ನಗದು ಹಾಗೂ ಪ್ರಮಾಣ ಪತ್ರ ಒಳಗೊಂಡಿದೆ ಎಂದು ಜಿಲ್ಲಾ ವಾರ್ತಾಽಕಾರಿ ಬಿ.ವಿ.ತುಕಾರಾಂರಾವ್ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net