ಬಾಲ್ಯವಿವಾಹದ ವಿರುದ್ಧ ನಿರ್ದ್ಯಾಕ್ಷಿಣ್ಯ ಕಾನೂನು ಕ್ರಮ

ಚಿತ್ರದುರ್ಗದಲ್ಲಿ ಗುರುವಾರ ಆಯೋಜಿಸಿದ್ದ ವಿವಿಧ ಸಮನ್ವಯ ಸಮಿತಿಗಳ ಸಭೆಯಲ್ಲಿ ಡಿಸಿ ಟಿ. ವೆಂಕಟೇಶ್, ಡಾ. ರಂಗಸ್ವಾಮಿ, ಡಾ.ಜಿ.ಪಿ. ರೇಣುಪ್ರಸಾದ್, ವಿಜಯಕುಮಾರ್, ಮಲ್ಲಿಕಾರ್ಜುನ್ ಇತರರು ಇದ್ದರು.
ಚಿತ್ರದುರ್ಗದಲ್ಲಿ ಗುರುವಾರ ಆಯೋಜಿಸಿದ್ದ ವಿವಿಧ ಸಮನ್ವಯ ಸಮಿತಿಗಳ ಸಭೆಯಲ್ಲಿ ಡಿಸಿ ಟಿ. ವೆಂಕಟೇಶ್, ಡಾ. ರಂಗಸ್ವಾಮಿ, ಡಾ.ಜಿ.ಪಿ. ರೇಣುಪ್ರಸಾದ್, ವಿಜಯಕುಮಾರ್, ಮಲ್ಲಿಕಾರ್ಜುನ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಽಕಾರಿ ಟಿ.ವೆಂಕಟೇಶ್ ಎಚ್ಚರಿಕೆ
  • ಅಂಗನವಾಡಿಗಳಿಗೆ ಸ್ವಂತ ಸೂರು ನಿರ್ಮಿಸಿ
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಚಿತ್ರದುರ್ಗ: ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಕಂಡುಬAದರೆ ಸಂಬAಽಸಿದ ಅಽಕಾರಿಗಳು ಹಾಗೂ ಮದುವೆ ಮಾಡಿಸಿ ದವರ ವಿರುದ್ಧ ನಿ ರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಽಕಾರಿ ಟಿ. ವೆಂಕಟೇಶ್ ಎಚ್ಚರಿಸಿದರು.
ಡಿಸಿ ಕಚೇರಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವÊದ್ಧಿ ಇಲಾಖೆ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಸಮನ್ವಯ ಸ ಮಿತಿಗಳ ಸಭೆಯಲ್ಲಿ ಮಾತನಾಡಿದರು.
ಯಾವುದೇ ಒಂದು ಬಾಲ್ಯವಿವಾಹ ಪ್ರಕರಣ ಬೆಳಕಿಗೆ ಬಂದಾಗ ಈವರೆಗೆ ಯಾರು ತನಿಖೆ ನಡೆಸಿದ್ದಾರೆ? ಪ್ರಕರಣ ಯಾವ ಹಂತ ದಲ್ಲಿದೆ? ಯಾರಿಗೆ ಶಿಕ್ಷೆಯಾಗಿದೆ ಎಂಬ ಸಂಪೂರ್ಣ ವಿವರ ಇರಬೇಕು. ಈ ನಿಟ್ಟಿನಲ್ಲಿ ಚಾಲ್ತಿ ಪ್ರಕರಣಗಳ ನಿಖರ ಚಾರ್ಟ್ ಸಿದ್ಧಪ ಡಿಸಿಕೊಳ್ಳುವಂತೆ ಅಽಕಾರಿಗಳಿಗೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್‌ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಏಪ್ರಿ ಲ್ ನಿಂದ ಮಾರ್ಚ್ವರೆಗೆ ೨೦೨ ಬಾಲ್ಯವಿವಾಹಗಳ ಕುರಿತು ಮಾಹಿತಿ ಲಭ್ಯವಾಗಿತ್ತು.

ಈ ಪೈಕಿ ಅಽಕಾರಿಗಳು ಸಕಾಲದಲ್ಲಿ ಭೇಟಿ ನೀಡಿ ೧೧೭ ಬಾಲ್ಯವಿವಾಹಗಳಾಗುವುದನ್ನು ತಡೆದಿದ್ದಾರೆ. ಆದರೆ, ಕಣ್ಣು ತಪ್ಪಿಸಿ ಬೇ ರೆ ಬೇರೆ ಕಡೆ ವಿವಾಹವಾಗಿದ್ದ ೮೫ ಪ್ರಕರಣಗಳನ್ನು ಪತ್ತೆ ಹಚ್ಚಿ, ಎಲ್ಲ ರ ಮೇಲೂ ಎ-ï‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ ರು.
ಬಾಲ್ಯವಿವಾಹ ತಡೆಗೆ ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಮೀಣ ಹಾಗೂ ಬಾಲ್ಯವಿವಾಹ ಸಾಧ್ಯತೆ ಹೆಚ್ಚಿರುವ ಸೂಕ್ಷ÷್ಮ ಪ್ರದೇಶ ಗಳನ್ನು ಗುರುತಿಸಿ, ಅಲ್ಲಿನ ಶಾಲೆ ಮತ್ತು ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಬಾಡಿ ಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಆದ್ಯತೆ ಮೇಲೆ ಸ್ವಂತ ಕಟ್ಟಡ ನಿರ್ಮಿಸಲು ಕ್ರಮವಹಿಸ ಲಾಗಿದೆ ಎಂದು ಡಿಸಿ ಹೇಳಿದರು.
ಕೆಎಂಇಆರ್‌ಸಿ ಯೋಜನೆಯಡಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ೩೧೩ ಕೋಟಿ ರೂ. ಅನುದಾನ ಮಂಜೂರಾಗಿ ದೆ. ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು.
ಗ್ರಾಮೀಣ ಭಾಗದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಜಾಗವಿದೆ. ನಗರ ಪ್ರದೇಶದಲ್ಲಿ ತೀವ್ರ ಸ್ಥಳಾವಕಾಶದ ಕೊರತೆ ಎದುರಾಗಿದೆ. ಕಂದಾಯ ಇಲಾಖೆ ಅಽಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಿ ಜಾಗ ಗುರುತಿಸಿ ಅಂಗನವಾಡಿಗಳಿಗೆ ಸ್ವಂತ ಸೂರು ಕಲ್ಪಿಸಬೇಕು ಎಂದರು.
ಜಿಲ್ಲೆಯಲ್ಲಿ ೩೨೪ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿವೆ. ನಗರ-೧೭೨, ಗ್ರಾಮೀಣ-೧೫೨ ಕೇಂದ್ರಗಳಿವೆ. ಮೊದಲ ಹಂತದಲ್ಲಿ ೨೪೭ ಅಂಗನವಾಡಿ ಕಟ್ಟಡಗಳ ನಿರ್ಮಾಣ ಹಾಗೂ ೧೫೦ ಕಟ್ಟಡಗಳ ಉನ್ನತೀಕರಣ ಕಾಮಗಾರಿ ಕೈಗೆತ್ತಿ ಕೊಳ್ಳ ಲಾಗಿದೆ.
ದ್ವಿತೀಯ ಹಂತದ ೩೧೯ ಕೋಟಿ ರೂ. ಅನುದಾನದಲ್ಲಿ ೭೬೯ ಹೊಸ ಕಟ್ಟಡಗಳ ನಿರ್ಮಾಣ, ೮೮೮ ಕಟ್ಟಡಗಳ ನವೀಕರಣ ಪ್ರಗತಿಯಲ್ಲಿದೆ ಎಂದು ವಿಜಯಕುಮಾರ್ ಹೇಳಿದರು.
ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಸರ್ಕಾರ ಜಾರಿಗೆ ತಂದಿರುವ ಪೌಷ್ಟಿಕ ಆಹಾರ ಯೋಜನೆಯಡಿ ಪ್ರಗತಿ ಸಾಽಸಬೇಕು, ಗ್ರಾಪಂ ಮಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಗಳ ಸಭೆಗಳನ್ನು ಕಡ್ಡಾಯ ನಡೆಸುವಂತೆ ಜಿಲ್ಲಾಽಕಾರಿ ತಾಕೀತು ಮಾಡಿದರು.
ಜಿಪಂ ಉಪ ಕಾರ್ಯದರ್ಶಿ ಡಾ. ರಂಗಸ್ವಾಮಿ, ಡಿಎಚ್‌ಒ ಡಾ. ಜಿ.ಪಿ. ರೇಣುಪ್ರಸಾದ್, ಲೀಡ್‌ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ.ಪ್ರವೀಣ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್, ಶಾಲಾ ಶಿಕ್ಷಣ ಇಲಾಖೆ ವಿದ್ಯಾಽಕಾರಿ ತಿಪ್ಪೇ ಸ್ವಾಮಿ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹರೀಶ್‌ಕುಮಾರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net