ಚಿತ್ರದುರ್ಗ: ರಾಜ್ಯದಲ್ಲಿ ಸರ್ಕಾರಿ ಮಹಿಳಾ ನೌಕರರ ಮೇಲೆ ಹ¯್ಲೆ, ಕಿರುಕುಳ, ದೌರ್ಜನ್ಯ ನಡೆಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಶಿನಿಗೌಡ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಿಳೆಯರಿಗೆ ವೈದ್ಯಕೀಯ ತಪಾಸಣೆ, ಕಾನೂನು ಅರಿವು ಕುರಿತು ಕಾರ್ಯಾಗಾರ ನಡೆಸುವ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.
ಬೀದರ್‌ನಿAದ ಚಾಮರಾಜನಗರದವರೆಗೆ ಪ್ರವಾಸ ಕೈಗೊಂಡು ಮಹಿಳಾ ನೌಕರರನ್ನು ಸಂಘಟಿಸಲಾಗುವುದು. ಎರಡೂವರೆ ವರ್ಷದಿಂದ ಸಂಘ ಸಕ್ರಿಯವಾಗಿದೆ. ರಾಜ್ಯದ ೨೦ ಜಿ¯್ಲÉಗಳಲ್ಲಿ ಕಾರ್ಯಪ್ರವೃತ್ತವಾಗಿದೆ. ಇನ್ನುಳಿದ ಜಿ¯್ಲÉಗಳಲ್ಲೂ ಸಂಘಟನೆ ಚುರುಕುಗೊಳಿಸುವ ಮೂಲಕ ಸ್ವಾಭಿಮಾನ, ರಕ್ಷಣೆ, ಬದ್ಧತೆ ಹಾಗೂ ಹಕ್ಕುಗಳ ಕುರಿತು ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಆರೋಗ್ಯ ಸಂಜೀವಿನಿ ಯೋಜನೆ ಪುನರ್ ಪರಿಶೀಲನೆ, ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಯೋಜನೆ ಜಾರಿಗೊಳಿಸುವುದು, ಶಿಶುಪಾಲನಾ ಕೇಂದ್ರ ಸ್ಥಾಪನೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದರು.
ಸAಘ ದ ಜಿ¯್ಲÁಧ್ಯಕ್ಷೆ ಎಂ. ಸುಶ್ಮಾರಾಣಿ, ರಾಜ್ಯ ಖಜಾಂಚಿ ಡಾ. ವೀಣಾ ಕೃಷ್ಣಮೂರ್ತಿ, ಸಂಘಟನಾ ಕಾರ್ಯದರ್ಶಿಗಳಾದ ಮಂಜುಳಾ, ಲಲಿತಮ್ಮ, ಎಂ. ಆಶಾರಾಣಿ, ಡಾ. ವಿಜಯಲಕ್ಷಿ÷್ಮÃ, ಚಳ್ಳಕೆರೆ ತಾಲೂಕು ಅಧ್ಯಕ್ಷೆ ಕರಿಯಮ್ಮ ಇತರರಿದ್ದರು.