ಯೋಜನೆ ಕಾಮಗಾರಿ ತ್ವರಿತಗೊಳಿಸುವ ನಿಟ್ಟಿನಲ್ಲಿ ಕಳೆದ ಫೆಬ್ರವರಿ ೨೭ ರಂದು ಸಿರಿಗೆರೆ ಬÊಹನ್ಮಠದಲ್ಲಿ ಶ್ರೀಗಳ ಸಾನ್ನಿಧ್ಯದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಅಽಕಾರಿಗಳ ಸಭೆ ಜರುಗಿತ್ತು. ಕೇಂದ್ರದ ಕÊಷಿ ಸಿಂಚಾ ಯಿ ಯೋಜನೆಯಡಿ ಭದ್ರಾ ಮೇಲ್ದಂಡೆ ಯೋಜನೆ ಸೇರಿಸಿ, ತ್ವರಿತವಾಗಿ ಯೋಜನೆ ಅನುಷ್ಠಾನಗೊಳಿಸಲು ೧೦ ಸಾವಿರ ಕೋಟಿ ರೂ. ಅಗತ್ಯವಿದ್ದು, ಇದರಲ್ಲಿ ಶೇ.೬೦ ಅಂದರೆ ೬ ಸಾವಿರ ಕೋಟಿ ರೂ.ಗಳನ್ನು ಕೇಂದ್ರ, ಉಳಿದ ಶೇ.೪೦ ಭಾಗದಷ್ಟು ೪ ಸಾವಿರ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಭರಿಸಬೇಕಾಗಿದೆ.