ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿನಿಯರು ಅಸ್ವಸ್ಥ

oplus_0
oplus_0
Published on

ಅರಕೇರಾ: ಆಲ್ಕೋಡ ಗ್ರಾಮದ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ಶಾಲೆಯಲ್ಲಿ ಮಂಗಳವಾರ ಬೆಳಗ್ಗೆ ಚಿತ್ರಾನ್ನ ಸೇವಿಸಿದ ಬಳಿಕ 12 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.

ತಲೆಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾಗಿದ್ದ ವಿದ್ಯಾರ್ಥಿನಿಯರನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ವಿದ್ಯಾರ್ಥಿಗಳನ್ನು ದೇವದುರ್ಗ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ವಸತಿ ಶಾಲೆಯ 100 ವಿದ್ಯಾರ್ಥಿನಿಯರು ಬೆಳಗ್ಗೆ ಚಿತ್ರಾನ್ನ ಸೇವಿಸಿದ್ದರೂ 12 ಜನರು ಅಸ್ವಸ್ಥರಾಗಿದ್ದಾರೆ.

ಪ್ರಾರ್ಥನೆ ನಂತರ ಆರೋಗ್ಯ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅಸ್ವಸ್ಥಗೊಳ್ಳಲು ಕಾರಣ ಪತ್ತೆಯಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net