ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ

udp-5-chittani
Published on

ಉಡುಪಿ: ಯಕ್ಷಗಾನವು ನಮ್ಮ ನಾಡಿನ ಸಂಸತಿಯನ್ನು ಪರಿಚಯಿಸುವ ಮತ್ತು ಕಲೆಯನ್ನು ಅರಳಿಸುವ, ಇಂದ್ರಿಯಗಳನ್ನು ಜಾಗೃತಗೊಳಿಸುವ ಒಂದು ಪ್ರಕಾರವಾಗಿದೆ. ಅದನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮ ಸಹಕಾರಿಯಾಗಲಿ ಎಂದು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಹೇಳಿದರು.

ಭಾನುವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಶ್ರೀವಿರಾಂಜನೇಯ ಯಕ್ಷಮಿತ್ರ ಮಂಡಳಿ ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಸಹಯೋಗದೊಂದಿಗೆ ನಡೆದ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಉದ್ಘಾಟಿಸಿ ಮಾತನಾಡಿದರು. ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ್​ ರಾವ್​, ಅಭಿಮಾನಿ ಬಳಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ.ಗೋಪಿಕೃಷ್ಣ ರಾವ್​, ಸುಬ್ರಹ್ಮಣ್ಯ ಚಿಟ್ಟಾಣಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net