ವಿಜಯವಾಣಿ ಸುದ್ದಿಜಾಲ ಕಲಬುರಗಿ.ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಚಿತ್ತಾಪುರ ತಾಲೂಕಿನ ದಂಡೋತಿ ಬಳಿಯ ಕಾಗಿಣಾ ನದಿಯಲ್ಲಿ ಪ್ರವಾಹ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಪ್ರವಾಹ ಉಂಟಾಗಿ ಚಿತ್ತಾಪುರ-ಕಲಬುರಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ.ಶಹಾಬಾದ ಮೂಲಕ ಚಿತ್ತಾಪುರ-ಕಲಬುರಗಿ ವಾಹನಗಳು ಸಂಚರಿಸುತ್ತಿವೆ.