ಪ್ರಿಯಾಂಕ್ ಕ್ಷೇತ್ರ ಚಿತ್ತಾಪುರದಲ್ಲಿ ಭಗವಾ ಧ್ವಜಗಳ ತೆರವು

district-koppal-gangavathi-rss-fir-communal-clash
Published on

ಕಲಬುರಗಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಚಟುವಟಿಕೆ ನಿಷೇಧದ ವಿವಾದದ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಅ.19ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕಾಗಿ ಅಳವಡಿಸಿದ ಅಲಂಕಾರಿಕ ಭಗವಾ ಧ್ವಜಗಳು, ಬ್ಯಾನರ್ ಗಳನ್ನು, ಕೇಸರಿ ಪರಾರಿಗಳನ್ನು ತೆರವುಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ವಿಜಯ ದಶಮಿ ಉತ್ಸವ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಸಂಘ ಶತಾಬ್ದಿ ಸಂಭ್ರಮಕ್ಕಾಗಿ ಭರ್ಜರಿ ತಯಾರಿಯನ್ನು ನಡೆಸಿಕೊಳ್ಳಲಾಗುತ್ತಿತ್ತು.

ಚಿತ್ತಾಪುರ ಪಟ್ಟಣದ ಪ್ರಮುಖ ವೃತ್ತಗಳಲ್ಲಿ, ರಸ್ತೆಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಕೇಸರಿ ಬಣ್ಣದ ಪರಾರಿ, ಅಭಿಮಾನಿಗಳು ಬ್ಯಾನರ್ ಗಳನ್ನು, ಭಗವಾ ಧ್ವಜಗಳನ್ನು ಕಟ್ಟಿದ್ದರು.

ಪುರಸಭೆ ನೌಕರರು ಸಿಬ್ಬಂದಿಗಳು ರಾತ್ರೋ ರಾತ್ರಿ ಆಗಮಿಸಿ, ಪರವಾನಗಿ ಇಲ್ಲದೇ ಅಳವಡಿಸಲಾಗಿದೆ ಎಂದು ತೆರವುಗೊಳಿಸಿದ್ದಾರೆ.

ಸಂಘದ ಅಭಿಮಾನಿಗಳು ಕಾರ್ಯಕರ್ತರು ವಿರೋಧಿಸಿ ಪುರಸಭೆಗೆ ಧಿಕ್ಕಾರವನ್ನು ಕೂಗಿದ್ದಾರೆ. ಪೊಲೀಸರ ನೇತೃತ್ವದಲ್ಲಿ ಭಗವಾ ಧ್ವಜದ ಪರಾರಿಗಳನ್ನು ತೆರವುಗೊಳಿಸಿರುವುದು ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net