ಜನರಿಗೆ ಅಗತ್ಯ ವಸ್ತು ಕಲ್ಪಿಸಿ

CLK SABHE 07
Published on

ಚಳ್ಳಕೆರೆ: ಮನೆಯಲ್ಲೇ ಉಳಿದಿರುವ ಜನರಿಗೆ ಅಗತ್ಯ ವಸ್ತುಗಳ ಕೊರತೆಯಾಗದಂತೆ ರೈತರು ತರಕಾರಿ ಮಾರಾಟ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕೆಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ತಾಲೂಕು ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಬಡ ಕುಟುಂಬಗಳ ಅನುಕೂಲಕ್ಕಾಗಿ ವಿತರಿಸುತ್ತಿರುವ ಉಚಿತ ಹಾಲು ಸೇರಿ ವಿವಿಧ ಯೋಜನೆಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ ಮಾತನಾಡಿ, 2019-20ನೇ ಸಾಲಿನಲ್ಲಿ ತಾಲೂಕಿನ ಸುಮಾರು 14 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಬೆಳೆಯಲಾಗಿದ್ದ ಕಲ್ಲಂಗಡಿ, ಸಪೋಟ, ಕರಬೂಜ, ಬಾಳೆಹಣ್ಣು, ಟೊಮ್ಯಾಟೊ, ಪಪ್ಪಾಯಿ ಹಣ್ಣು ಮಾರಾಟಕ್ಕೆ ಮಾರುಕಟ್ಟೆ ಇಲ್ಲದೇ ರೈತರು ನಷ್ಟ ಅನುಭವಿಸಿದ್ದಾರೆ ಎಂದು ತಿಳಿಸಿದರು. ತಹಸೀಲ್ದಾರ್ ಎಂ. ಮಲ್ಲಿಕಾರ್ಜುನ, ನಗರಸಭೆ ಸದಸ್ಯ ಎಂ. ಜೆ. ರಾಘವೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net