ಶ್ರದ್ಧಾಭಕ್ತಿಯಿಂದ ಜರುಗಿದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ

27adarshkdga1
Published on

ಮಡಿಕೇರಿ: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ ೨೦ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.


ಗುರು ಗಣಪತಿ ಪೂಜೆ, ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಸಂಜೆ ವಾರ್ಷಿಕೋತ್ಸವ ಪ್ರಯುಕ್ತ ಗುರು ಗಣಪತಿ ಹೋಮ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿತರಿಸಲಾಯಿತು.


ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ ಜರುಗಿತು. ನಂತರ ತೀರ್ಥಪ್ರಸಾದ ವಿನಿಯೋಗ ಹಾಗೂ ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. ನಗರದ ವಿವಿಧ ಬಡಾವಣೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net