

ಕಲಬುರಗಿ: ಬಸನಾಳದಲ್ಲಿ ಫೆ.೮ರಂದು ಬೆಳಗ್ಗೆ ೧೦.೩೦ಕ್ಕೆ ನಿಜ ಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಅನಾವರಣ ಸಮಾರಂಭ ಹಾಗೂ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಮೂರ್ತಿ ಅನಾವರಣ ಸ್ವಾಗತ ಸಮಿತಿ ಗೌರವಾಧ್ಯಕ್ಷ ಚಂದ್ರಕಾಂತ ಶಖಾಪುರ ತಿಳಿಸಿದರು.
ಫೆ.8ರಂದು ಗ್ರಾಮದಲ್ಲಿ ವಾದ್ಯ ಮೇಳದೊಂದಿಗೆ ಚೌಡಯ್ಯನವರ ಮೂರ್ತಿ ಮೆರವಣಿಗೆ ನಡೆಯಲಿದೆ. ನರಸೀಪುರದ ಅಂಬಿಗರ ಚೌಡಯ್ಯನವರ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ತೊನಸನಳ್ಳಿ(ಎಸ್)ಯ ಶ್ರೀ ಡಾ.ಮಲ್ಲಣ್ಣಪ್ಪ ಸ್ವಾಮೀಜಿ, ಮಲ್ಲಿಕಾರ್ಜುನ ಮುತ್ಯಾ, ಶ್ರೀ ವರಲಿಂಗೇಶ್ವರ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಾಸಕ ಎಂ.ವೈ.ಪಾಟೀಲ್ ಮೂರ್ತಿ ಅನಾವರಣ ಮಾಡಲಿದ್ದು, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ಜಿಪಂ ಮಾಜಿ ಅಧ್ಯಕ್ಷ ನಿತೀನ್ ಗುತ್ತೇದಾರ, ಮಹಾಂತೇಶ ಪಾಟೀಲ್, ಲಚ್ಚಪ್ಪ ಜಮಾದಾರ, ಶಿವಕುಮಾರ ನಾಟೀಕಾರ ಸೇರಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಜಟೆಪ್ಪ ಪೂಜಾರಿ, ಭೀಮಣ್ಣ ಅಂಕಲಗಿ, ಮಲ್ಲು ಇತರರಿದ್ದರು.