

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲವಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಆಂಗ್ಲವಾಧ್ಯಮ ಪ್ರೌಢಶಾಲೆಯ ಒಟ್ಟು ಹದಿನಾಲ್ಕು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದಿಂದ ಮೊಹಮ್ಮದ್ ಅತಿಫ್, ಮಹಮ್ಮದ್ ಅಪ್ರಾಝ್, ಮೊಹಮ್ಮದ್ ಶಬಿತ್, ವಾನಸ್, ಮೊಹಮ್ಮದ್ ಹಿಶಾಮ್ ಖಾನ್, ಸಾಕ್ಷಿತ್ ಪಿ.ಜೈನ್, ದೃವೀತ್ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರೀತಿ, ಸಾದ್ವಿ ನಾಯಕ್, ಸುದೀಕ್ಷಾ ಹಾಗೂ ಪ್ರೌಢಶಾಲಾ ವಿಭಾಗದಿಂದ ರಿತು ಫ್ರಾನ್ಸಿಸ್, ಸಾನ್ವಿ ಎಂ.ನಾಯಕ್, ರೇಚಲ್ ಡಿಸೋಜ ಮತ್ತು ಲೆನಿಷಾ ಮೆಂಡೋನ್ಸಾ ಚಿನ್ನದ ಪದಕ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಂಬತ್ತನೇ ತರಗತಿಯ ಅವನಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಲಾವಣ್ಯ ಶೆಟ್ಟಿ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ್ದರು.