

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಕಾರ್ಕಳ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ವಿದ್ಯಾಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದ ಎಂಟನೇ ತರಗತಿಯ ಮೌಲ್ಯ, ಪ್ರೌಢಶಾಲಾ ವಿಭಾಗದ ಒಂಬತ್ತನೇ ತರಗತಿಯ ವರುಣ್ ಕಾಮತ್, ಹತ್ತನೇ ತರಗತಿಯ ಸೋಹನ್ ಭಂಡಾರಿ ಮತ್ತು ಅಕ್ಷಿತಾ ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ.