ಕ್ರೈಸ್ತ ಸಮುದಾಯ ಬೆಂಬಲ ಬಿಜೆಪಿಗೆ

vot
Published on

ಮಂಗಳೂರು: ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ ಮಾತ್ರ ಕ್ರೈಸ್ತ ಸಮುದಾಯವನ್ನು ಸ್ಮರಿಸುತ್ತದೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಪ್ರತಿಯೊಂದು ಹಂತದಲ್ಲಿಯೂ ನಮ್ಮ ಸಮುದಾಯವನ್ನು ನಿರ್ಲಕ್ಷ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕ್ರೈಸ್ತ ಸಮುದಾಯ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಕರ್ನಾಟಕ ಕ್ರೈಸ್ತರ ಸಾಮಾಜಿಕ ಕ್ಷೇಮಾಭಿವೃದ್ಧಿ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಹ್ಯಾರಿ ಡಿಸೋಜ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ . ಯಡಿಯೂರಪ್ಪ ಅವರು ಕ್ರೈಸ್ತರ ಅಭಿವೃದ್ಧಿ ಸಮಿತಿ ರಚಿಸಿ ವಿವಿಧ ಕಾರ್ಯಕ್ರಮ ಅನುಷ್ಠಾನಕ್ಕೆ ತಂದರು. ಕ್ರೈಸ್ತ ಸಮುದಾಯ ಎದುರಿಸುತ್ತಿರುವ ಸಮಸ್ಯೆ ಪರಿಹರಿಸಲು ಮುಖ್ಯಮಂತ್ರಿಗಳಾಗಿದ್ದ ಬೊಮ್ಮಾಯಿ ಅವರ ನೃತೃತ್ವದಲ್ಲಿ ಪ್ರತೀ ಜಿಲ್ಲೆಗಳಲ್ಲಿ ಅದಾಲತ್ ನಡೆಸಿದ್ದಾರೆ. ಆದರೆ ಕಾಂಗ್ರೆಸ್ ನಮ್ಮ ಮನವಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷೃ ಮಾಡಿದೆ ಎಂದರು.

ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮ ರಚಿಸುತ್ತೇವೆ ಎಂದು ಕಾಂಗ್ರೆಸ್ ಆಡಳಿತದ ಕಳೆದ ಬಜೆಟ್‌ನಲ್ಲಿ 200 ಕೋಟಿ ರೂ. ಮೀಸಲಿಟ್ಟಿದ್ದಾರೆ. ಈವರೆಗೆ ಅನುಷ್ಠಾನದ ಆರಂಭಿಕ ಕೆಲಸವೂ ನಡೆದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಕ್ರೈಸ್ತ ಸಮುದಾಯದ ಯಾರೇ ಮುಖಂಡರಿಗೆ ಅಧಿಕಾರ ನೀಡಿಲ್ಲ. ಪಕ್ಷದ ಯಾವುದೇ ವಿಭಾಗದಲ್ಲಿ, ನಿಗಮ ಮಂಡಳಿಯಲ್ಲಿ ಅಧ್ಯಕ್ಷರನ್ನೂ ನೇಮಕ ಮಾಡಿಲ್ಲ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net