

ಕುಂದಾಪುರ: ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ಶ್ರಾವಣ ವಾಸದ ಪ್ರಯುಕ್ತ ಜಿಎಸ್‌ಬಿ ಸವಾಜದ ಸುಮಂಗಲಿಯರಿಂದ ಸವಾಜದ ಶ್ರೇಯೋಭಿವೃದ್ಧಿಗಾಗಿ ಸಾಮೂಹಿಕ ಚೂಡಿ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಾನುವಾರ ನಡೆಯಿತು.
ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಸಾಮೂಹಿಕ ಚೂಡಿ ಪೂಜೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಮಧ್ಯಾಹ್ನ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಸವಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮ ಸಂಪನ್ನಗೊಂಡಿತು. ದೇವಳದ ಧರ್ಮದರ್ಶಿ ಮಂಡಳಿ ಸದಸ್ಯರು, ಜಿಎಸ್‌ಬಿ ಸವಾಜದವರು ಮತ್ತಿತರರು ಉಪಸ್ಥಿತರಿದ್ದರು.