ಆದಿಚುಂಚನಗಿರಿ ಮಠದಲ್ಲಿ ವಿವಿಧ ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ

chunchashri
Published on

ಆದಿಚುಂಚನಗಿರಿ ಸಂಸ್ಥಾನ ಮಠದ ಜಗದ್ಗುರು ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವ ಅಂಗವಾಗಿ ಪ್ರತಿವರ್ಷ ಕೊಡಮಾಡುವ ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳವಾರ ನಡೆಯಿತು.

ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಶ್ರೀಮಠದ ಬಿಜಿಎಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಖಾ ಮಠಗಳ ಎಲ್ಲ ಶ್ರೀಗಳು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಸಿ.ಎಸ್.ಪುಟ್ಟರಾಜು, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್‌ನಾರಾಯಣ, ಹಿರಿಯ ಪತ್ರಕರ್ತ ಎಚ್.ಆರ್. ರಂಗನಾಥ, ಕರ್ನಾಟಕ ಜನಪದ ಪರಿಷತ್ ಅಧ್ಯಕ್ಷ ಹಿ.ಚಿ.ಬೋರಲಿಂಗಯ್ಯ, ಮಾಜಿ ಶಾಸಕ ಸುರೇಶ್ ಗೌಡ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

ಸಾಹಿತ್ಯ ಹಾಗೂ ಜಾನಪದ ಕ್ಷೇತ್ರದ ಸಾಧನೆಗಾಗಿ ಡಾ. ರಾಮೇಗೌಡ, ಸಮಾಜ ಸೇವೆಗಾಗಿ ಹಿರಯಣ್ಣ ಹೆಗಡೆ, ಶೈಕ್ಷಣಿಕ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ.ಬಸವೇಗೌಡ ಮತ್ತು ಜಾನಪದ ಕ್ಷೇತ್ರದ ಮಲ್ಲವ್ವ ಬಸಪ್ಪ ಮೇಗೇರಿಯವರಿಗೆ ಶ್ರೀಗಳು ಚುಂಚಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net