ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿ ಜಾತಿ ನಿಂದನೆ; ಶಿವಮೊಗ್ಗದ ಪಾದ್ರಿ ಅರೆಸ್ಟ್​

Church Father
Published on

ಶಿವಮೊಗ್ಗ: ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖಾಸಗಿ ಕಾಲೇಜಿನ ಪ್ರಾಚಾರ್ಯ ಹಾಗೂ ಏಷ್ಯಾದ ಎರಡನೇ ಅತಿ ದೊಡ್ಡ ಚರ್ಚ್‌ನ ಪಾದ್ರಿಯೊಬ್ಬರನ್ನು ಪೋಕ್ಸೋ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಬಿ.ಎಚ್.ರಸ್ತೆಯಲ್ಲಿರುವ ಚರ್ಚ್‌ನ ಪಾದ್ರಿ ಫ್ರಾನ್ಸಿಸ್ ಫರ್ನಾಂಡೀಸ್ ಬಂಧಿತರು. ಇವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ, ಜಾತಿ ನಿಂದನೆ ಕೂಡ ಮಾಡಿದ್ದರು ಎಂದು ಸಂತ್ರಸ್ತೆ ಕೋಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೊಲೀಸರು ಪಾದ್ರಿಯನ್ನು ವಶಕ್ಕೆ ಪಡೆದಿದ್ದು, ಮೆಗ್ಗಾನ್​ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿದ ನಂತರ ನ್ಯಾಯಾಧೀಶರ ಮುಂದೆ ಹಾಜರಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net